ರಾಷ್ಟ್ರಪತಿ ಚುನಾವಣೆ; ಪ್ರಧಾನಿ ಮೋದಿ ಆಯ್ಕೆ ಯಾರು?

ನವದೆಹಲಿ:

ನವದೆಹಲಿ, ಏಪ್ರಿಲ್ 06 ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲು ಮಾಡಿ ಮತ್ತೆ ಸರ್ಕಾರ ರಚನೆ ಮಾಡಿದೆ. ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ರಾಷ್ಟ್ರಪತಿ ಚುನಾವಣೆ ಬಗ್ಗೆ ಚರ್ಚೆಗಳು ಆರಂಭವಾಗಿವೆ.ಜುಲೈ ತಿಂಗಳಿನಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

17ನೇ ರಾಷ್ಟ್ರಪತಿ ಚುನಾವಣೆಯಲ್ಲಿ ಆಯ್ಕೆಗೊಂಡು ಮುಂದಿನ ದೇಶದ ಪ್ರಥಮ ಪ್ರಜೆ ಯಾರಾಗಲಿದ್ದಾರೆ? ಎಂಬ ಕುತೂಹಲ ಎಲ್ಲರಲ್ಲೂ ಇದೆ. ಹಲವಾರು ಜನರ ಹೆಸರುಗಳು ಮುನ್ನಲೆಗೆ ಬಂದಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ `ಹಿಜಾಬ್’ ನಿಷೇಧ : ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ

ರಾಷ್ಟ್ರಪತಿ ಹುದ್ದೆಗೆ ಪ್ರಧಾನಿನರೇಂದ್ರ ಮೋದಿ ಆಯ್ಕೆ ಯಾರು? ಎಂಬುದು ಎಲ್ಲರನ್ನೂ ಕಾಡುವ ಪ್ರಶ್ನೆ. ಅಚ್ಚರಿಯ ಸಂಗತಿ ಎಂದರೆ ಒಡಿಶಾ ರಾಜ್ಯದ ಇಬ್ಬರ ಹೆಸರು ಪ್ರಧಾನಿ ಮೋದಿ ಪರಿಗಣನೆಯಲ್ಲಿದೆ. ಇದರಲ್ಲಿ ಒಬ್ಬರು ಮಹಿಳೆ.

ನರೇಂದ್ರ ಮೋದಿ ಮೊದಲ ಆಯ್ಕೆ ದ್ರೌಪದಿ ಮುರ್ಮು. ಒಡಿಶಾ ರಾಜ್ಯದ ಇವರು ಜಾರ್ಖಂಡ್‌ನ ಮಾಜಿ ರಾಜ್ಯಪಾಲರು. ಬುಡಕಟ್ಟು ಸಮುದಾಯಕ್ಕೆ ಸೇರಿದ ಮಹಿಳೆ ದ್ರೌಪದಿ ಮುರ್ಮು ಬಿಜೆಪಿಯ ಅಚ್ಚರಿ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

ದ್ರೌಪದಿ ಮುರ್ಮು ಬುಡಕಟ್ಟು ಸಮುದಾಯದವರು ಮತ್ತು ದಲಿತ ಮಹಿಳೆ. ಒಂದು ವೇಳೆ ಅವರನ್ನು ರಾಷ್ಟ್ರಪತಿಯಾಗಿ ಮಾಡಿದರೆ ಮಹಿಳೆಯರು ಮತ್ತು ಬುಡಕಟ್ಟು ಸಮುದಾಯದ ವಿಶ್ವಾಸವನ್ನು ಪಕ್ಷಗಳಿಸಲು ಅನುಕೂಲವಾಗಲಿದೆ ಎಂಬುದು ಲೆಕ್ಕಾಚಾರವಾಗಿದೆ.

ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆ ಸಂಕೀರ್ಣ: ರಸ್ತೆಯಲ್ಲಿಯೇ ಆಕ್ರಂದನ

ಮೋದಿ 2ನೇ ಆಯ್ಕೆ; ಪ್ರಧಾನಿ ನರೇಂದ್ರ ಮೋದಿ ಎರಡನೇ ಆಯ್ಕೆ ಸಹ ಒಡಿಶಾ ರಾಜ್ಯದವರು. ನಿವೃತ್ತ ಐಎಎಸ್ ಅಧಿಕಾರಿ, ಸಿಎಜಿ ಆಗಿರುವ ಗಿರೀಶ್ ಚಂದ್ರ ಮುರ್ಮು. ಸಿಎಜಿ ಆಗಿ ಅಧಿಕಾರ ಸ್ವೀಕಾರ ಮಾಡುವ ಮೊದಲು ಇವರು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ಮೊದಲ ಲೆಫ್ಟಿನೆಂಟ್ ಗೌರ್ವನರ್ ಆಗಿದ್ದರು.

ಸರ್ಕಾರಿ ಸೇವೆಯಲ್ಲಿದ್ದ ಗಿರೀಶ್ ಚಂದ್ರ ಮುರ್ಮು ಹಣಕಾಸು, ಕಂದಾಯ ಸೇರಿದಂತೆ ವಿವಿಧ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಕನ್ನಡ ಕಲಿಕೆ ಕಡ್ಡಾಯಕ್ಕೆ ತಡೆ: ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಗಿರೀಶ್ ಮುರ್ಮು ಮೊದಲು ಗುಜರಾತ್ ರಾಜ್ಯದಲ್ಲಿ ಪ್ರಮುಖ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಆಡಳಿತಾತ್ಮಕ, ಆರ್ಥಿಕ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಅಪಾರ ಅನುಭವ ಹೊಂದಿದ್ದಾರೆ.

ಉತ್ಕಲ್ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಬರ್ನಿಂಗ್ ಹ್ಯಾವ್ ವಿವಿಯಿಂದ ಎಂಬಿಎ ಪದವಿ ಪಡೆದಿದ್ದಾರೆ. ಗುಜರಾತ್ ಕೇಡರ್‌ನ 1985ನೇ ಬ್ಯಾಚ್ ಐಎಎಸ್ ಅಧಿಕಾರಿ.

ಸ್ವಾತಂತ್ರ್ಯ ಸಿಕ್ಕಿ 75 ವರ್ಷದ ಬಳಿಕ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಪಡೆದ ಹಳ್ಳಿ!

ಎಷ್ಟು ಮತಗಳು ಬೇಕು? 776 ಸಂಸದರು, 4,120 ಶಾಸಕರು ಸೇರಿ 10,98,903 ಮತದಾರರು ಸೇರಿ ರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ. ಬಿಜೆಪಿ ಇದರಲ್ಲಿ ಶೇ 50ಕ್ಕಿಂತ ಹೆಚ್ಚಿನ ಮತಗಳನ್ನು ಹೊಂದಿದೆ.

ಸದ್ಯ ರಾಷ್ಟ್ರಪತಿಯಾಗಿರುವ ರಾಮನಾಥ್ ಕೋವಿಂದ್ ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸು ಕುರಿತು ಚರ್ಚೆಗಳು ನಡೆದಿದೆ. ಆದರೆ ಇದುವರೆಗೂ ರಾಜೇಂದ್ರ ಪ್ರಸಾದ್ ಹೊರತುಪಡಿಸಿದರೆ ಬೇರೆ ಯಾರೂ ಸಹ ಎರಡನೇ ಅವಧಿಗೆ ರಾಷ್ಟ್ರಪತಿಯಾಗಿ ಆಯ್ಕೆಯಾಗಿಲ್ಲ.

24 ಗಂಟೆಯಲ್ಲಿ ದ್ವೀಪರಾಷ್ಟ್ರ ಲಂಕಾಕ್ಕೆ ಭಾರತದಿಂದ 76,000 ಟನ್ ಇಂಧನ ಪೂರೈಕೆ

ಪ್ರಧಾನಿ ನರೇಂದ್ರ ಮೋದಿ ಎನ್‌ಡಿಎ ಮೈತ್ರಿಕೂಟದ ನಾಯಕರ ಅಭಿಪ್ರಾಯವನ್ನು ಸಂಗ್ರಹ ಮಾಡಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ವೈಎಸ್‌ಆರ್ ಪಕ್ಷ, ಟಿಆರ್‌ಎಸ್ ಪಕ್ಷದ ನಾಯಕರ ಅಭಿಪ್ರಾಯ ಕೇಳಿ ಅಂತಿಮ ತೀರ್ಮಾನ ಮಾಡಲಿದ್ದಾರೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಹೆಸರು ಸಹ ಚಾಲ್ತಿಯಲ್ಲಿದೆ.

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೆಸರು ಕೇಳಿ ಬಂದಿತ್ತು. ಆದರೆ ಇಬ್ಬರೂ ನಾಯಕರು ಈ ಸುದ್ದಿಯನ್ನು ತಳ್ಳಿ ಹಾಕಿದ್ದರು.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap