ಬೆಂಗಳೂರು :
ದೀಪಾವಳಿ ಹಬ್ಬದ ಅಂಗವಾಗಿ ಆನ್‌ಲೈನ್ ಪ್ಲಾಟ್‌ಫಾರ್ಮ್ ರಿಯಾಯತಿ ಘೋಷಿಸಿವೆ. ಹಾಗೆಯೇ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಸಹ ಆಯ್ದ ಮೊಬೈಲ್‌ಗಳಿಗೆ ಅತ್ಯುತ್ತಮ ಡಿಸ್ಕೌಂಟ್ ಲಭ್ಯ ಮಾಡಿದೆ. ಆ ಪೈಕಿ ನಥಿಂಗ್ ಸಂಸ್ಥೆಯು ನಥಿಂಗ್ ಫೋನ್ 2a (Nothing Phone (2a) 5G) ಫೋನ್ ಭರ್ಜರಿ ಡಿಸ್ಕೌಂಟ್ ಬೆಲೆ ಪಡೆದುಕೊಂಡಿದೆ.
ಇನ್ನು ಈ ಫೋನ್ 8GB RAM + 128 GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅಗಿದೆ.
ಫ್ಲಿಪ್‌ಕಾರ್ಟ್ ತಾಣದಲ್ಲಿ ದೀಪಾವಳಿ ಹಬ್ಬದ ಸೇಲ್‌ನಲ್ಲಿ ನಥಿಂಗ್ ಫೋನ್ 2a (Nothing Phone (2a) 5G) ಫೋನ್ ಶೇ. 15% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8 GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 21,999ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್ ಸಹ ಪಡೆಯಬಹುದಾಗಿದೆ.
ಹಾಗೆಯೇ ನಥಿಂಗ್ ಸಂಸ್ಥೆಯ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಅಲ್ಲದೇ ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ನಥಿಂಗ್ ಫೋನ್ 2a ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.
ನಥಿಂಗ್ ಫೋನ್ 2a ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಇದರ ಡಿಸ್‌ಪ್ಲೇಯು 30Hz ನಿಂದ 120Hz ವರೆಗಿನ ರಿಫ್ರೆಶ್ ರೇಟ್, 394ppi ಪಿಕ್ಸೆಲ್ ಸಾಂದ್ರತೆ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಪಡೆದಿದೆ. HDR10+ ಬೆಂಬಲ ಮತ್ತು 1,300 nits ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.
ನಥಿಂಗ್ ಫೋನ್ 2a ಮೊಬೈಲ್ ಆಕ್ಟಾ-ಕೋರ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊ SoC ಪ್ರೊಸೆಸರ್ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ ನಥಿಂಗ್ ಓಎಸ್ 2.5 ಸಪೋರ್ಟ್‌ನಲ್ಲಿ ರನ್ ಆಗಲಿದೆ. ಇದು ಮೂರು ವರ್ಷಗಳ ಆಂಡ್ರಾಯ್ಡ್ ನವೀಕರಣಗಳು ಲಭ್ಯ. ಹಾಗೆಯೇ 12GB RAM ಮತ್ತು 256 GB ಸ್ಟೋರೇಜ್ ಆಯ್ಕೆ ಇದೆ.
ನಥಿಂಗ್ ಫೋನ್ 2a ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ದ್ವಿತೀಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ನಥಿಂಗ್ ಫೋನ್ 2a ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 45W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲವನ್ನು ಒದಗಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ 5.3, NFC, GPS ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಸಪೋರ್ಟ್ ಪಡೆದಿದೆ.