ಹುಬ್ಬಳ್ಳಿ :
ಏಪ್ರಿಲ್ 06 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಏಪ್ರಿಲ್ 6ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಭೇಟಿ ನೀಡಿಲಿದ್ದಾರೆ. ಇದಲ್ಲದೆ ಏಪ್ರಿಲ್ 01 ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸಹಕಾರ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ವರಿಷ್ಠರೊಂದಿಗೆ ಚರ್ಚೆಯಾಗಬೇಕು. ವರಿಷ್ಠರು ಕರೆದಾಗ ದೆಹಲಿಗೆ ಹೋಗುತ್ತೇನೆ ಎಂಬುದಾಗಿ ಹೇಳಿದರು.
ಮಾ. 28ರವರೆಗೆ ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿ ಹಲವೆಡೆ ಮಳೆ; ಹವಮಾನ ಇಲಾಖೆ ಮುನ್ಸೂಚನೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ