ಹಿರಿಯೂರು :
ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ತತ್ವಾದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕಿ ಪೂರ್ಣಿಮಾಶ್ರೀನಿವಾಸ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ವಾಜಪೇಯಿ ಅವರ 94 ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಾಜಪೇಯಿ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿದ್ದ ಮಹಾನ್ ಚೇತನ. ಅವರು ಸಿದ್ದಾಂತಗಳನ್ನು ಬಿಟ್ಟು ಸಾಗುತ್ತಿರಲಿಲ್ಲ. ಎಲ್ಲ ಜನಪ್ರತಿನಿಧಿಗಳು ಅವರ ಆದರ್ಶ ಅಳವಡಿಸಿಕೊಂಡರೆ ಪ್ರಜಾಪ್ರಭುತ್ವದ ಆಶಯಗಳಿಗೆ ಗೌರವ ಸಿಗುತ್ತದೆ ಎಂದರಲ್ಲದೆ ಗ್ರಾಮವಿಕಾಸ ಹರಿಕಾರರಾಗಿ ದೇಶವನ್ನು ಅಭಿವೃದ್ದಿ ಪಥದಲ್ಲಿ ಮುನ್ನಡೆಸಿದ ಕೀರ್ತಿ ವಾಜಪೇಯಿ ಅವರಿಗೆ ಸಲ್ಲುತ್ತದೆ. ತಮ್ಮ ಆಡಳಿತಾವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮತ್ತು ಹಳ್ಳಿಯಿಂದ ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಬಿsವೃದ್ಧಿಪಡಿಸಿದ್ದು ದೇಶಕ್ಕೆ ಅವರ ಕೊಡುಗೆಗಳಾಗಿವೆ ಎಂದು ಹೇಳಿದರು.
ನಗರಸಭೆ ಸದಸ್ಯ ಜಿ. ಪ್ರೇಮ್‍ಕುಮಾರ್ ಮಾತನಾಡಿ, ದೇಶದ ಪ್ರತಿ ಮಗುವಿಗೆ ಅಕ್ಷರ ಜ್ಞಾನ ನೀಡಲು ಸರ್ವ ಶಿಕ್ಷಣ ಅಭಿಯಾನ ಯೋಜನೆ ಅನುಷ್ಠಾನಗೊಳಿಸಿದ ಕೀರ್ತಿ ವಾಜಪೇಯಿಯವರಿಗೆ ಸಲ್ಲುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಮಂಜುಳಾ, ಸದಸ್ಯರಾದ ಟಿ. ಚಂದ್ರಶೇಖರ್, ವನಿತಾ, ಬಿಜೆಪಿ ಮುಖಂಡ ಕೇಶವಮೂರ್ತಿ ಅನೇಕರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ