ಒತ್ತಡ ನಡುವೆ ಖಾಸಗಿ ಬದುಕಿಗೂ ಆದ್ಯತೆ ನೀಡಿ….!

ತುಮಕೂರು: 

    ಸಾಮಾಜಿಕ ಕಳಕಳಿ ಹೊಂದಿರುದ ದಿನಪತ್ರಿಕೆಗಳನ್ನು ರೂಪಿಸುವ ಹೊಣೆ ಹೊತ್ತಿ ರುವ ಸಂಪಾದಕರು ಕಾರ್ಯ ಒತ್ತಡದ ನಡುವೆಯೂ ತಮ್ಮ ಕುಟುಂಬಕ್ಕಾಗಿ ಸಮಯ ಮೀಸ ಲಿಟ್ಟು ಅವರೊಂದಿಗೆ ಬೆರೆತು ಕುಟುಂಬದ ಕಲ್ಯಾಣಕ್ಕೆ ಪ್ರಯತ್ನಿಸಬೇಕು ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಹೇಳಿದರು.

    ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಸಮಿತಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ವಿಶ್ವವಿದ್ಯಾಲಯ  ದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತಮ್ಮ ಹಾಲಪ್ಪ ಪ್ರತಿಷ್ಠಾನದಡಿ ಚಿನ್ನದ ಪದಕ ನೀಡಲಾಗುತ್ತಿದೆ. ಇದೇ ರೀತಿ ಪತ್ರಕರ್ತರ ಕಲ್ಯಾಣ ಹಾಗೂ ಪ್ರೋತ್ಸಾಹಕ್ಕಾಗಿ ಸಾಧ್ಯವಾದಷ್ಟು ದತ್ತಿ ಹಣ ಮೀಸಲಿ ಡುವ ಮೂಲಕ ಅವರ ವೃತ್ತಿ ಬದುಕಿಗೆ ಶಕ್ತಿ ತುಂಬುವ ಪ್ರಯತ್ನ ಮಾಡುವುದಾಗಿ ಹೇಳಿದರು. 

   ಸಂಘದ ರಾಜ್ಯ ಉಪಾಧ್ಯಕ್ಷ ರಾಮಕೃಷ್ಣ ಮಾಮರ ಮಾತನಾಡಿ, ಸಣ್ಣ ಪತ್ರಿಕೆಗಳು ಗ್ರಾಮೀಣ ಪ್ರದೇಶದ ಮೂಲೆಮೂಲೆಗಳಲ್ಲಿನ ಸಮಸ್ಯೆಗಳನ್ನು ಎತ್ತಿ ಹಿಡಿದು ಸಮಾಜದ ಮುಂದೆ ತರುತ್ತವೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಣ್ಣ ಪತ್ರಿಕೆಗಳನ್ನು ನಡೆಸುವುದು ಕಷ್ಟವಾಗಿದೆ ಎಂದರು.

   ಸಂಘದ ಜಿಲ್ಲಾಧ್ಯಕ್ಷ ಜಿ.ಕರುಣಾಕರ್ ಮಾತನಾಡಿ, ವಿಜಯ ಮುಗಿಲು ಪತ್ರಿಕೆ ಸಹ ಸಂಪಾದಕ ಹನುಮಂತಯ್ಯ ಅವರು ಸಂಘದಲ್ಲಿ ದತ್ತಿಯಾಗಿ ಇಟ್ಟಿರುವ ಪ್ರಶಸ್ತಿ ಹಾಗೂ ನಗದು ಪ್ರೋತ್ಸಾಹ ನೀಡಿದೆ ಎಂದರು.ಮಾಜಿ ಶಾಸಕ, ಅಮೃತವಾಣಿ ಸಂಪಾದಕ ಗಂಗಹನುಮಯ್ಯ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಯೋಗೀಶ್, ವಿಜಯ ಮುಗಿಲು ಪತ್ರಿಕೆ ಸಹ ಸಂಪಾದಕ ಹನುಮಂತಯ್ಯ ಮಾತನಾಡಿದರು.ಇದೇ ವೇಳೆ, ಪ್ರಜಾ ಪರ್ವ ಪತ್ರಿಕೆ ಸಂಪಾದಕ ಕೊಪ್ಪಳದ ಎಂ.ಜಿ ಶ್ರೀನಿವಾಸ್ ಅವರಿಗೆ ‘ಸಂಪಾದಕ ರತ್ನ’ ದತ್ತಿ ಪ್ರಶಸ್ತಿ ನೀಡಿ ಗೌವಿಸಲಾಯಿತು.

   ಕಾರ್ಯಕ್ರಮದಲ್ಲಿ ಏಕೇಶ್ ಪತ್ರಿಕೆ ಸಂಪಾದಕ ಟಿ.ಇ.ರಘುರಾಮ್, ಬೆಳಗೆರೆ ನ್ಯೂಸ್ ಸಂಪಾದಕ ಜಯಣ್ಣ ಬೆಳಗೆರೆ, ಸುದಿನ ಪತ್ರಿಕೆ ಸ್ಥಾನಿಕ ಸಂಪಾದಕ ಹೆಚ್.ಎಸ್.ಹರೀಶ್, ಈ ಮುಂಜಾನೆ ಸಂಪಾದಕ ಮೊಹಮದ್ ಯೂನಿಸ್, ಸೂರ್ಯಾಸ್ಥ ಸಂಜೆ ಪತ್ರಿಕೆ ಸಂಪಾದಕ ವಿಜಯಕುಮಾರ್ ಪಾಟೀಲ್, ಸತ್ಯದರ್ಶಿನಿ ಪತ್ರಿಕೆ ಸಹ ಸಂಪಾದಕ ಹೆಚ್.ಕೆ.ರವೀಂದ್ರನಾಥ್ ಹೊನ್ನೂರು, ಹಿರಿಯ ಛಾಯಾಗ್ರಾಹಕ ಅನು ಶಾಂತರಾಜು, ಆರ್ ಲಕ್ಷ್ಮೀನಾರಾಯಣ ಶೆಟ್ಟಿ, ಈ ನಾಡು ವರದಿಗಾರ ಸಿ.ಟಿ.ಎಸ್.ಗೋವಿಂದಪ್ಪ, ಹಿರಿಯ ಪತ್ರಕರ್ತ ಆಂಜನಪ್ಪ, ವಿಡಿಯೋ ಜರ್ನಲಿಸ್ಟ್ ಗಳಾದ ನಾಗರಾಜು, ಸೋಮಶೇಖರ್ ಅವನ್ನು ಸನ್ಮಾನಿಸಿ ಗೌರವಿಸಲಾಯಿತು.

   ಸಂಘದ ಜಿಲ್ಲಾ ಉಪಾಧ್ಯಕ್ಷ ವಿಜಯ ಮುಗಿಲು ಸಂಪಾದಕ ಪಿ.ಎಸ್.ಮಲ್ಲಿಕಾರ್ಜುನ್, ಪ್ರಧಾನ ಕಾರ್ಯದರ್ಶಿ, ಪ್ರಜಾಮನ ಸಂಪಾದಕ ತೋ.ಸಿ.ಕೃಷ್ಣಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ತುಮಕೂರು ಮಿತ್ರ ಸಂಪಾದಕ ಮಂಜುನಾಥ ಗೌಡ ಸೇರಿದಂತೆ ವಿವಿಧ ಪತ್ರಿಕೆಗಳ ಸಂಪಾದಕರು ಭಾಗವಹಿಸಿದ್ದರು.

Recent Articles

spot_img

Related Stories

Share via
Copy link