ಬೆಂಗಳೂರು :
ಅಗತ್ಯ ವಸ್ತುಗಳ ಬೆಲೆಯ ಏರಿಕೆಯ ನಡುವೆ ಇದೀಗ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್. ಖಾಸಗಿ ಶಾಲೆಗಳ ಶುಲ್ಕ ಈ ಬಾರಿ 30ರಿಂದ 40ರಷ್ಟು ಶುಲ್ಕ ಏರಿಕೆಯಾಗಿದೆ.
ಈ ಬಾರಿ ಶೇ. 30ರಿಂದ 40ರಷ್ಟು ಶುಲ್ಕ ಏರಿಕೆ ಮಾಡಿವೆ. ಖಾಸಗಿ ಶಾಲೆಗಳು 2023-24ನೇ ಸಾಲಿನಿಂದ ಶುಲ್ಕವನ್ನು ಹೆಚ್ಚಳ ಮಾಡುತ್ತಿವೆ. ಹಿಂದಿನ ವರ್ಷಕ್ಕಿಂತ ಈ ವರ್ಷ 30 ರಿಂದ 40 ಪ್ರತಿಶತ ಶುಲ್ಕ ಹೆಚ್ಚಳ ಮಾಡಿದ ಕುರಿತು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಪ್ರತಿ ನೀರು, ಕರೆಂಟ್ ಬಿಲ್, ತೆರಿಗೆ ಹಾಗೂ ನೋಂದಣಿ ಶುಲ್ಕವನ್ನು ಏರಿಕೆ ಮಾಡುತ್ತಿದೆ. ಅಲ್ಲದೆ ಸರ್ಕಾರ ಪ್ರತಿ ವರ್ಷ ಅಧಿಕ ಶಾಲೆಗಳ ಆರಂಭಕ್ಕೆ ಅನುಮತಿ ನೀಡುತ್ತದೆ, ಶಾಲೆಗಳು ಹೆಚ್ಚಾದಂತೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಆದರೆ ಸರ್ಕಾರದ ತೆರಿಗೆಗಳು ಮಾತ್ರ ಕಡಿಮೆ ಇರುವುದಿಲ್ಲ. ಹೀಗಾಗಿ ಅನಿವಾರ್ಯವಾಗಿ ಶಾಲೆಗಳು ಪ್ರತಿ ವರ್ಷ ಶುಲ್ಕವನ್ನು ಏರಿಕೆ ಮಾಡಲು ಮುಂದಾಗುತ್ತಿವೆ.
ವರ್ಷದಿಂದ ವರ್ಷಕ್ಕೆ ಶುಲ್ಕದಲ್ಲಿ ಏರಿಕೆಯಾಗುತ್ತಲೇ ಇರುತ್ತದೆ ಅದೇ ರೀತಿ ಈ ವರ್ಷವೂ ಪಾಲಕರಿಗೆ ಶುಲ್ಕ ಏರಿಕೆಯ ಬಿಸಿ ತಗುಲಲಿದೆ ಎಂಬ ಸೂಚನೆ ಸಿಕ್ಕಿದೆ. ಈ ರೀತಿ ಶುಲ್ಕ ಹೆಚ್ಚಳ ಮಾಡಿರುವುದು ಅಸಂವಿಧಾನಿಕ ಶುಲ್ಕ ಹೆಚ್ಚಳ ಮಾಡಬೇಕಾದರೆ ವೈಜ್ಞಾನಿಕ ಕಾರಣ ಕೊಟ್ಟು ಶಿಕ್ಷಣ ಇಲಾಖೆಗೆ ಪತ್ರ ಬರೆಯಬೇಕು. ಇಲಾಖೆ ಅನುಮತಿ ಕೊಟ್ರೆ ಮಾತ್ರ ಶುಲ್ಕ ಹೆಚ್ಚಳ ಮಾಡಬಹುದು ಎಂದು ಪೋಷಕ ಸಮನ್ವಯ ಸಮಿತಿ ಅಧ್ಯಕ್ಷ ದಯಾನಂದ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ