ವಿದ್ಯಾರ್ಥಿಗಳಿಂದಲೇ ಶಿಕ್ಷಕರಿಗೆ ಕಿರುಕುಳ : ಸಿಎಂಗೆ ಪತ್ರ ಬರೆದ ಖಾಸಗಿ ಶಿಕ್ಷಣ ಸಂಸ್ಥೆಗಳು

ಬೆಂಗಳೂರು

    ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಪ್ರಥಮ ಆದ್ಯತೆ. ಆದರೆ ಇತ್ತೀಚಿನ ದಿನಗಳಲ್ಲಿ ಬಹುತೇಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವಯಸ್ಸಿಗೆ ಮೀರಿ ದುರ್ವರ್ತನೆ ವರ್ತನೆಗಳನ್ನು ತೋರುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಶಿಕ್ಷಕರಿಗೆ ವಿದ್ಯಾರ್ಥಿಗಳಿಂದಲೇ ಕಿರುಕುಳ, ಅವಹೇಳನ ಹೆಚ್ಚಾಗಿದೆ.

   ಶಿಕ್ಷಣ ಸಚಿವ ಮಧು ಬಂಗಾರಪ್ಪರಿಗೆ ಶಾಲಾ ವಿದ್ಯಾರ್ಥಿಯಿಂದ ಮುಜುಗರದ ಹೇಳಿಕೆ ಬೆನ್ನಲ್ಲೇ ಈಗ ಶಾಲೆಗಳಲ್ಲಿ ಕನಿಷ್ಠ ಶಿಸ್ತು ಕ್ರಮದ ನಿಯಮಗಳ ಜಾರಿಗೆ ಒತ್ತಾಯ ಕೇಳಿ ಬಂದಿದೆ. ವಿದ್ಯಾರ್ಥಿಗಳ ನಿಯಂತ್ರಣಕ್ಕೆ ಕನಿಷ್ಠ ನಿಯಮಗಳನ್ನು, ಮಾನದಂಡಗಳನ್ನ ಶಾಲಾ ಹಂತದಲ್ಲಿ ಜಾರಿಗೆ ತರಬೇಕೆಂಬ ಒತ್ತಾಯ ಎಲ್ಲಡೆ ಕೇಳಿಬರುತ್ತಿದೆ. ಈ ಬಗ್ಗೆ ಖಾಸಗಿ ಶಾಲೆಗಳ ಸಂಘಟನೆ ಸಿಎಂಗೆ ಪತ್ರ ಬರೆದು ಮನವಿ ಮಾಡಿದೆ.

   ಇತ್ತೀಚೆಗೆ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಶೋಷಣೆಗೆ ಒಳಗಾಗುತ್ತಿದ್ದಾರೆ. ವಿದ್ಯಾರ್ಥಿಗಳು ಸಾಕಷ್ಟು ಕಿರುಕುಳ ನೀಡುವ ಬಗ್ಗೆ ಆರಪಗಳು ಕೇಳಿ ಬರುತ್ತಿವೆ. ಶಿಕ್ಷಕರಿಗೆ, ಶಾಲಾ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಮನವಿ ಮಾಡಿವೆ ಎಂದು ಕ್ಯಾಮ್ಸ್ ಖಾಸಗಿ ಶಾಲೆಗಳ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.
   ಬಹುತೇಕ ಶಿಕ್ಷಣ ಸಂಸ್ಥೆಗಳು, ಶಿಕ್ಷಕರು, ಪಾಲಕ, ಪೋಷಕರು ಪ್ರಸ್ತುತ ಪರಿಸ್ಥಿತಿಯನ್ನು ನಿಭಾಯಿಸಲಾಗದೆ ಅಸಹಾಯಕತೆ ವ್ಯಕ್ತಪಡಿಸುತ್ತಿರುವುದು ಪ್ರತಿಯೊಂದು ಶಿಕ್ಷಣ ಸಂಸ್ಥೆಯಲ್ಲೂ ವರದಿಯಾಗುತ್ತಿದೆ ಎನ್ನಲಾಗಿದೆ. ಇಂತಹ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಮಕ್ಕಳಿಗೆ ಅನ್ಯಾಯ ಆಗದೇ ಇರುವ ರೀತಿಯಲ್ಲಿ ಹಾಗೂ ಶಿಕ್ಷಣ ವ್ಯವಸ್ಥೆಗೆ ಚ್ಯುತಿ ಬರದೇ ನೋಡಿಕೊಳ್ಳವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ.
 
   ಒಟ್ಟಿನಲ್ಲಿ, ಸಣ್ಣಪುಟ್ಟ ಕಾರಣಗಳಿಗೆ ಮಕ್ಕಳ ಹಕ್ಕುಗಳ ಆಯೋಗ ಮಧ್ಯ ಪ್ರವೇಶಿಸುತ್ತಿರುವುದು, ಪೋಷಕರು ಹಾಗೂ ಶಿಕ್ಷಣ ಇಲಾಖೆಯ ಕಠಿಣ ನಿಯಮಗಳಿಂದಾಗಿ ಶಿಕ್ಷಕರಿಗೆ ಸ್ವಾತಂತ್ರ್ಯ ಇಲ್ಲದಾಗಿದೆ. ಮಕ್ಕಳಿಗೆ ಕನಿಷ್ಠ ಬೈದು ಬುದ್ಧಿ ಹೇಳುವುದಕ್ಕೂ ಆಗದೇ ಇರುವ ಸ್ಥಿತಿಗೆ ಖಾಸಗಿ ಶಾಲೆಗಳು ಹಾಗೂ ಶಿಕ್ಷಕರು ಬಂದಿದ್ದು ಅನೇಕ ಶಿಕ್ಷಕರು ಬೇಸತ್ತು ಹೋಗಿದ್ದಾರೆ. ಹೀಗಾಗಿ ಶಾಲೆಗಳಲ್ಲಿ ಕನಿಷ್ಠ ಶಿಸ್ತು ಕ್ರಮದ ನಿಯಮಗಳ ಜಾರಿಗೆ ಒತ್ತಾಯ ಕೇಳಿಬಂದಿದೆ. ಶಿಕ್ಷಣ ಇಲಾಖೆ ಯಾವ ನಡೆಗೆ ಮುಂದಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Recent Articles

spot_img

Related Stories

Share via
Copy link