ಲೋಕಸಭಾ ಚುನಾವಣೆ :ಬೆದರಿಕೆ ಪತ್ರ : ಖಡಕ್‌ ಉತ್ತರ ಕೊಟ್ಟ ಪ್ರಿಯಾಂಕ್‌ ಖರ್ಗೆ

ಕಲಬುರಗಿ: 

    ಭಾರತೀಯ ಜನತಾ ಪಾರ್ಟಿಯವರು ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೆ, ತನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿರುವುದಾಗಿ ಮತ್ತು ಅದರಲ್ಲಿ ತನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

    ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಈ ಲೋಕಸಭೆ ಚುನಾವಣೆಯಲ್ಲಿ ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

   ನನಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ ಅಲ್ಲದೆ, ಈ ಬೆದರಿಕೆ ಪತ್ರ ಫಿನ್​ಲ್ಯಾಂಡ್​ನಿಂದ ಬಂದಿದೆ ಎಂದು ಹೇಳಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿಯಲ್ಲಿ ಜೀವ ಬೆದರಿಕೆ ಪತ್ರ ಓದಿದರು.

   “ಪಂಚಾಮೃತದಿಂದ ಪೂಜೆ ಮಾಡಿದರೂ ನಿನ್ನ ಜಾತಿ ಬೇರೆಯಾಗುವುದಿಲ್ಲ. ಎಂತ ವೇಷ ಭೂಷಣ ಹಾಕಿದರೂ ನಿನ್ನ ಜಾತಿ ಬದಲಾಗುವುದಿಲ್ಲ. ಮಂತ್ರಿಯಾಗು, ರಾಜನಾಗೂ, ನಿನ್ನ ಸೊಕ್ಕು ಹೊಲೆಯ-ಮಾದಿಗ ಓಣಿಯಲ್ಲಿ ನಡೆಯುತ್ತೆ” ಎಂದು ಪತ್ರದಲ್ಲಿ ಅಶ್ಲೀಲ ಪದ ಬಳಸಿದ್ದಾರೆ. ಖಾಕಿಯಾದರೂ, ಖಾದಿಯಾದರೂ, ಯಾರಿಂದಲಾದರೂ ನಿನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದರು.

    ಬೆದರಿಕೆ ಸಂಬಂಧ ಮಾರ್ಚ್ 13 ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದೇನೆ. ವಿಕಾಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ. ಹೆದರಿಸುವುದು ಅಥವಾ ಬೆದರಿಸಲು ಬಂದರೆ ಅದಕ್ಕೆಲ್ಲ ನಾವು ಹೆದರುವುದಿಲ್ಲ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap