ರಾಜ್ಯ ಬಿಜೆಪಿ ಕಂಡು ನನಗೆ ಕರುಣೆ ಮೂಡುತ್ತಿದೆ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು:

     ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಅಥೆನ್ಸ್ ಪ್ರವಾಸದಿಂದ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಇಸ್ರೋದ ವಿಜ್ಞಾನಿಗಳನ್ನು ಭೇಟಿ ಮಾಡಿ ಅಭಿನಂದಿಸಿದ್ದಾರೆ. ಆದರೆ, ಮೋದಿಯವರ ಈ ಭೇಟಿ ವೇಳೆ ಅವರ ಬಳಿ ರಾಜ್ಯದ ಯಾವುದೇ ಬಿಜೆಪಿ ನಾಯಕರೂ ಕಾಣಸಿಗುವುದು ವ್ಯಾಪಕ ಗುಸುಗುಸುವಿಗೆ ಕಾರಣವಾಗಿದೆ. 

    ಬೆಳಗ್ಗೆ 5.55ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸ್ವಾಗತಿಸಿದ್ದಾರೆ. ಈ ವೇಳೆ ಸಂಸದ ತೇಜಸ್ವಿ ಸೂರ್ಯ ಮತ್ತಿತರು ಹೆಚ್‌ಎಎಲ್ ಗೇಟ್ ಹೊರಗಡೆ ಸಾಮಾನ್ಯ ಜನರ ನಡುವೆ ನಿಂತು ಮೋದಿ ಅವರಿಗೆ ಸ್ವಾಗತ ಕೋರಿದ್ದಾರೆ.

    ನಂತರ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಪೀಣ್ಯದಲ್ಲಿರುವ ಇಸ್ರೋ ಕಚೇರಿವರೆಗೂ ಮೋದಿ ಅವರು ತೆರೆದ ವಾಹನದಲ್ಲಿ ಸಾಗಿದರು. ಈ ವೇಳೆಯೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ಮುನಿರತ್ನ, ಗೋಪಾಲಯ್ಯ ಮತ್ತು ಆರ್ ಅಶೋಕ್ ಸೇರಿದಂತೆ ಇತರರು ಬ್ಯಾರಿಕೇಡ್ ಆಚೆ ನಿಂತು ಕೈಬೀಸಿದ್ದಾರೆ. ಈ ಫೊಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಭಾರಿ ಟ್ರೋಲ್‌ಗೆ ಗುರಿಯಾಗಿವೆ.

    ಈ ಕುರಿತು ರಾಜ್ಯ ಕಾಂಗ್ರೆಸ್ ಕೂಡ ಟೀಕಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ ಬಿಜೆಪಿ ನಾಯಕರ ಪರಿಸ್ಥಿತಿಯನ್ನು ಕಂಡು ವ್ಯಂಗ್ಯವಾಡಿದ್ದಾರೆ.

   ರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ ಕರ್ನಾಟಕದ ಬಿಜೆಪಿ ನಾಯಕರ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ. ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap