ಮಹಿಳಾ ಅಥ್ಲೀಟ್ಸ್‌ ಗೆ ಕಿರುಕುಳ : ಮೋದಿಯನ್ನು ಕುಟುಕಿದ ಪ್ರಿಯಾಂಕ ಗಾಂಧಿ

ನವದೆಹಲಿ:

     ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಶನಿವಾರ ಭೇಟಿ ಮಾಡಿದರು.

    ದೆಹಲಿಯ ಜಂತರ್ ಮಂತರ್’ಗೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿಯವರು ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿ, ಮಾತುಕತೆ ನಡೆಸಿದರು.

    ಕುಸ್ತಿಪಟುಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿಯವರು, ಪ್ರಧಾನಿ ಮೋದಿಯವರಿಂದ ನನಗೆ ಯಾವುದೇ ನಿರೀಕ್ಷೆ ಇಲ್ಲ, ಏಕೆಂದರೆ ಅವರು ಈ ಕುಸ್ತಿಪಟುಗಳ ಬಗ್ಗೆ ಚಿಂತೆ ಮಾಡಿರುವುದೇ ಆದರೆ, ಅವರೇಕೆ ಇನ್ನೂ ಕುಸ್ತಿಪಟುಗಳನ್ನು ಭೇಟಿ ಮಾಡಿಲ್ಲ, ಮಾತುಕತೆ ನಡೆಸಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಇಡೀ ದೇಶ ನಿಂತಿದೆ. ಕುಸ್ತಿಪಟುಗಳು ಇದರ  ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ನನಗೆ ತುಂಬಾ ಹೆಮ್ಮೆ ಇದೆ ಎಂದು ಹೇಳಿದ್ದಾರೆ,
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap