ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ 

ಬೆಂಗಳೂರು:

    ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು 14 ಮತ್ತು ಮೇ 7ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಳ ಮಾಡಲು ಜಾಗೃತಿ ಅಭಿಯಾನವನ್ನು ಕೈಗೊಳ್ಳಲಾಗಿದೆ.

    ಮುಖ್ಯ ಚುನಾವಣಾಧಿಕಾರಿಯವರ ಕಛೇರಿ, ಕರ್ನಾಟಕದ ರೂಪ ಎಂ. ವಿ. ಸಹಾಯಕ ಮುಖ್ಯ ಚುನಾವಣಾಧಿಕಾರಿ ಸಿ. ಆ. ಸು. ಇಲಾಖೆ (ಚುನಾವಣೆಗಳು) ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ಜಿಲ್ಲಾ SVEEP ನೋಡಲ್ ಅಧಿಕಾರಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ.

    ಈ ಪತ್ರದಲ್ಲಿ 2024-ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಶೇ. 100ರಷ್ಟು ಮತದಾನ ಮಾಡಿರುವ ಮತಗಟ್ಟೆಗಳಿಗೆ ಪ್ರಶಸ್ತಿ ನೀಡುವ ಕುರಿತು ಉಲ್ಲೇಖ ಮಾಡಲಾಗಿದೆ.

 

ಪತ್ರದ ವಿವರಗಳು :

    ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಮತದಾನವು ದಿನಾಂಕ 26/04/2024ರಂದು ಹಾಗೂ ದಿನಾಂಕ 07/05/2024ರಂದು ನಡೆಯಲಿದೆ. ಈ ಸಂಬಂಧ ಮತದಾರರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಪ್ರಚಾರ/ SVEEP ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ/ ಆಯೋಜಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಲು ಭಾರತ ಚುನಾವಣಾ ಆಯೋಗವು ನಿರ್ದೇಶನಗಳನ್ನು ನೀಡಿರುತ್ತದೆ ಎಂದು ಹೇಳಿದೆ.

    ದಕ್ಷಿಣ ಕನ್ನಡ ಜಿಲ್ಲೆಯ (AC no 110 booth no 15 yelnir guthyadka, AC no 200 booth no 86 Banjarumale) 2 ಮತಗಟ್ಟೆಗಳಲ್ಲಿ ಶೇ. 100% ರಷ್ಟು ಮತದಾನ ಮಾಡಲು ನಿರ್ಧರಿಸಲಾಗಿರುತ್ತದೆ ಎಂದು ತಿಳಿಸಿರುತ್ತಾರೆ.

    ಈ ನಿಟ್ಟಿನಲ್ಲಿ ರಾಜ್ಯದಲ್ಲಿ ನಡೆಯುವ 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಶೇ. 100 ರಷ್ಟು ಮತದಾನವಾಗುವ ಮತಗಟ್ಟೆಗಳಿಗೆ ಪ್ರಶಸ್ತಿ & ಪುರಸ್ಕಾರವನ್ನು ನೀಡಲು ಹಾಗೂ ಪುರಸ್ಕೃತ ಜಿಲ್ಲೆಗೆ SVEEP ವತಿಯಿಂದ ಹೆಚ್ಚುವರಿ ಅನುದಾನ ಒದಗಿಸಲು ನಿರ್ಧರಿಸಲಾಗಿದೆ ಎಂದು ಹೇಳಿದೆ.

   ಆದ್ದರಿಂದ, ಶೇಕಡವಾರು ಮತದಾನ ಹೆಚ್ಚಿಸಲು ಎಲ್ಲಾ ರೀತಿಯ ಅಗತ್ಯ ಪ್ರಚಾರ/ SVEEP ಕಾರ್ಯಕ್ರಮಗಳನ್ನು ಹಮ್ಮಿಕೊಂಡು ದಾಖಲೆ ಪ್ರಮಾಣದ ಶೇ. 100 ಮತದಾನ ಯಶಸ್ವಿಯಾಗುವಂತೆ ಪ್ರಯತ್ನಿಸಲು ತಿಳಿಸಿದೆ.
    ತಮ್ಮ ಜಿಲ್ಲೆಗೆ ಸಂಬಂಧಿಸಿದ ಶೇ. 100 ಮತದಾನವಾಗಿರುವ ಮತಗಟ್ಟೆಗಳ ಮಾಹಿತಿಯನ್ನು ಈ ಕಛೇರಿಯ ಇ- ಮೇಲ್ ವಿಳಾಸ consveep@gmail.comಗೆ ಹಾಗೂ ಭೌತಿಕ ಪ್ರತಿಗಳನ್ನು ಈ ಕಛೇರಿಗೆ ಕಳುಹಿಸಿಕೊಡುವಂತೆ ಕೋರಲು ನಿರ್ದೇಶಿತಳಾಗಿದ್ದೇನೆ ಎಂದು ಪತ್ರದಲ್ಲಿ ಮಾಹಿತಿ ನೀಡಲಾಗಿದೆ.

    ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

    ದೇಶದಲ್ಲಿ 3ನೇ ಹಂತ ಮತ್ತು ಕರ್ನಾಟಕದಲ್ಲಿ 2ನೇ ಹಂತದಲ್ಲಿ ಮೇ 7ರ ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗದಲ್ಲಿ ಮತದಾನ ನಡೆಯಲಿದೆ.

Recent Articles

spot_img

Related Stories

Share via
Copy link