ಒಗ್ಗಟ್ಟಿನ ಪ್ರಚಾರ

ಹುಳಿಯಾರು:

                                ಜಿಲ್ಲೆಯಲ್ಲಿ ಸಚಿವರು, ಸಂಸದರು, ಶಾಸಕರು, ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಚಾರ ಮಾಡುತ್ತಿದ್ದು ಈ ಸಲ ಲೋಕೇಶ್‍ಗೌಡ ಗೆಲ್ಲುವ ಮೂಲಕ ಜೆಡಿಎಸ್ ಕೋಟೆ ಛಿಧ್ರವಾಗಿ ಬಿಜೆಪಿ ಕೋಟೆ ನಿರ್ಮಾಣವಾಗುತ್ತದೆ ಎಂದು ರಾಜ್ಯ ತೆಂಗುನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.

ಹುಳಿಯಾರು ಹೋಬಳಿಯಲ್ಲಿ ಬಿಜೆಪಿ ಅಭ್ಯರ್ಥಿ ಲೋಕೇಶ್‍ಗೌಡ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅತೀ ಹೆಚ್ಚು ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರಿದ್ದಾರೆ. ಅಲ್ಲದೆ ದೇಶದಲ್ಲಿ ಇರುವಂತೆ ಜಿಲ್ಲೆಯಲ್ಲೂ ಬಿಜೆಪಿ ಪರ ಅಲೆ ಇದೆ. ಅಲ್ಲದೆ ಜಿಲ್ಲೆಯಲ್ಲಿ ಹೆಚ್ಚಿನ ಅನುದಾನ ಬಳಸಿಕೊಂಡು ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ. ಜಿಲ್ಲೆಯ ಮತದಾರರು ಪಕ್ಷ ಬದಲಾವಣೆ ಬಯಸಿದ್ದು, ಬಿಜೆಪಿ ಸರ್ಕಾರದ ಸಾಧನೆಗಳೆ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಉತ್ತಮ ವಿಧೇಯಕಗಳನ್ನು ಯಾವುದೇ ಅಡೆತಡೆ ಇಲ್ಲದೇ ಅನುಮೋದನೆ ಪಡೆದುಕೊಳ್ಳುವ ಉದ್ದೇಶದಿಂದ ಪರಿಷತ್‍ನಲ್ಲಿ ಹೆಚ್ಚು ಸ್ಥಾನ ಗಳಿಸುವ ಅವಶ್ಯಕತೆ ಇದೆ. ಅಲ್ಲದೆ ಮುಂದಿನ ವಿಧಾನಸಭಾ ಚುನಾವಣೆಗೆ ಈ ಚುನಾವಣೆ ದಿಕ್ಸೂಚಿಯಾಗಿದೆ. ಆದ್ದರಿಂದ ಸದಸ್ಯರು ಯಾವುದೇ ಆಮಿಷಗಳಿಗೆ ಒಳಗಾಗದೆ, ಪಕ್ಷದ ಅಭ್ಯರ್ಥಿ ಲೋಕೇಶ್‍ಗೌಡ ಅವರಿಗೆ ಮೊದಲನೆ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಕೆಂಕೆರೆ ನವೀನ್, ತಾಪಂ ಮಾಜಿ ಸದಸ್ಯ ವಸಂತಯ್ಯ, ತಾಲ್ಲೂಕು ಬಿಜೆಪಿ ಮಾಜಿ ಅಧ್ಯಕ್ಷ ಮಿಲ್ಟ್ರಿಶಿವಣ್ಣ, ಮುಖಂಡರಾದ ಇಟ್ಟಿಗೆ ರಂಗಸ್ವಾಮಿ, ನರಸೇಗೌಡ, ಕೆ.ಆರ್.ಮಂಜುನಾಥ್, ಹೊನ್ನಪ್ಪ, ಬೆಂಕಿಬಸವರಾಜು ಮತ್ತಿತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link