ನವದೆಹಲಿ:
ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ವಿಪಕ್ಷಗಳ 146 ಸದಸ್ಯರ ಅಮಾನತು ಖಂಡಿಸಿ ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ INDIA ಒಕ್ಕೂಟದ ನಾಯಕರು ಧರಣಿ ಆರಂಭಿಸಿದ್ದಾರೆ.
ಲೋಕಸಭೆ ಮತ್ತು ರಾಜ್ಯಸಭೆಯಿಂದ ವಿರೋಧ ಪಕ್ಷಗಳ 146 ಸದಸ್ಯರ ಅಮಾನತು ಖಂಡಿಸಿ ಇಂಡಿಯಾ ಬಣದ ನಾಯಕರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಎನ್‌ಸಿಪಿ ವರಿಷ್ಠ ಶರದ್ ಪವಾರ್ ಮತ್ತು ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಇದಲ್ಲದೆ, ಎಲ್ಲ ರಾಜ್ಯಗಳ ಜಿಲ್ಲಾ ಕೆಂದ್ರಗಳಲ್ಲೂ ಇಂಡಿಯಾ ಬಣದ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.
ಈ ವೇಳೆ ಮಾತನಾಡಿಗ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು, ‘ನಾವು ಸಂಸತ್ತು, ಸಂಸದೀಯ ಮತ್ತು ಸಂವಿಧಾನದ ಘನತೆ ಉಳಿಸಲು ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಬಳಿಕ ಮಾತನಾಡಿದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ‘ಸಂಸತ್ತಿನಲ್ಲಿ ಪ್ರಶ್ನೆ ಎತ್ತಲು ಅವಕಾಶ ಸಿಗದಿದ್ದರೆ ನಾವು ಎಲ್ಲಿಗೆ ಹೋಗಬೇಕು’ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
