ಬೆಂಗಳೂರು:
ಹಿಜಾಬ್ ಅನುಮತಿ ಕೋರಿ ಸಲ್ಲಿಸಲಾಗಿರುವಂತ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ( ನಡೆಯುತ್ತಿದೆ. ಈ ಸಂದರ್ಭದಲ್ಲಿಯೇ ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರು,
ಹಿಜಾಬ್ ತೆಗೆದು, ತರಗತಿಗೆ ಪ್ರವೇಶಿಸಲು ಅನುಕೂಲವಾಗುವಂತೆ, ಪ್ರತ್ಯೇಕ ಸ್ಥಳದಲ್ಲಿ ಹಿಜಾಬ್ ಇರಿಸಲು ವ್ಯವಸ್ಥೆ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಹೈಕೋರ್ಟ್ ಮಧ್ಯಂತರ ತೀರ್ಪಿನನ್ವಯ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಅನ್ನು ಧರಿಸಿ ಪ್ರವೇಶಿಸದಂತೆ ಸೂಚಿಸಿದೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ಮಹಿಳಾ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಆವೃತ್ತ ಸ್ಥಳ ಕಲ್ಪಿಸುವಂತೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ