ಮಾಗಡಿ:
ಮಗನ ಕೆಲಸದ ವಿಚಾರವಾಗಿ ಯಾರೊಂದಿಗೂ ಹಣದ ವ್ಯವಹಾರ ಮಾಡಿಲ್ಲ ಎಂದು ಪಿಎಸ್ಐ ನೇಮಕಾತಿ ಹಗರಣದಲ್ಲಿ ಹೆಸರು ತಳುಕು ಹಾಕಿಕೊಂಡಿರುವ ದರ್ಶನ್ಗೌಡ ಅವರ ತಂದೆ, ಜೆಡಿಎಸ್ ಮುಖಂಡ ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ನಾಯಕರು ತಮ್ಮ ರಾಜಕೀಯ ಹಗೆತನಕ್ಕೆ ನಮ್ಮನ್ನು ಬಲಿಪಶು ಮಾಡುತ್ತಿದ್ದಾರೆ.
ನನ್ನ ಮಗ ದರ್ಶನ್ಗೌಡ ಪಿಎಸ್ಐ ಪರೀಕ್ಷೆ ಬರೆದು 5ನೇ ರ್ಯಾಂಕ್ ಪಡೆದಿರುವುದು ನಿಜ. ನಮ್ಮ ಮಗ ಸಿಐಡಿ ವಿಚಾರಣೆ ಎದುರಿಸಿದ್ದಾನೆ. ಆತನ ಒಎಂಆರ್ ಶೀಟ್, ಹಾಲ್ ಟಿಕೆಟ್ ಹಾಜರುಪಡಿಸಿದ್ದಾನೆ. ತನಿಖೆ ನಡೆಯುತ್ತಿದೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದರು.
ಯೂರೋಪ್ ಪ್ರವಾಸದಲ್ಲಿ ಪ್ರಧಾನಿ ಮೋದಿ: ಬರ್ಲಿನ್‌ನಲ್ಲಿ ಪ್ರತಿಧ್ವನಿಸಿತು ʻ2024; ಮೋದಿ ಒನ್ಸ್ ಮೋರ್ʼ ಘೋಷಣೆ!
ಕೆಸರೆರಚಾಟಕ್ಕೆ ವೇದಿಕೆ: ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿರುವ ಪಿಎಸ್ಐ ನೇಮಕಾತಿ ಹಗರಣ ರಾಜಕೀಯ ನಾಯಕರ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಹೋದರ ಸತೀಶ್ ಗೌಡ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ದರ್ಶನ್ಗೌಡ ಎಂಬ ಅಭ್ಯರ್ಥಿಯಿಂದ 80 ಲಕ್ಷ ರೂ. ಪಡೆದಿದ್ದಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಉಗ್ರಪ್ಪ ನೇರವಾಗಿ ಆರೋಪಿಸಿದ್ದಾರೆ.
ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಪ್ರಭಾವಿ ಸಚಿವರ ತಮ್ಮನ ಮೂಲಕ ಮಾಗಡಿ ಮೂಲದ ಅಭ್ಯರ್ಥಿ ಹಣದ ವ್ಯವಹಾರ ಮಾಡಿದ್ದಾರೆ. ನಾವೆಲ್ಲ ಗಂಡಸರಲ್ಲ, ಅವರೊಬ್ಬರೇ ಗಂಡಸರು ಎನ್ನುವ ಮೂಲಕ ಪರೋಕ್ಷವಾಗಿ ಸಚಿವ ಅಶ್ವತ್ಥ ನಾರಾಯಣ್ ವಿರುದ್ಧ ಕೈ ತೋರಿಸಿದ್ದಾರೆ. ರಾಜಕೀಯ ನಾಯಕರ ಕೆಸರೆರಚಾಟದ ಬೆನ್ನಲ್ಲೇ ಮರೂರು ಹ್ಯಾಂಡ್ಪೋಸ್ಟ್ನ ದರ್ಶನ್ಗೌಡನ ತಂದೆ, ಜೆಡಿಎಸ್ ಮುಖಂಡ ವೆಂಕಟೇಶ್ ಬೇಸರ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ
ನನಗೆ ಸಚಿವರ ಸಹೋದರ ಮತ್ತು ಡಿಕೆಶಿ ಪರಿಚಯವಿದೆ: ನಾನು ತಾಪಂ ಮಾಜಿ ಉಪಾಧ್ಯಕ್ಷನಾಗಿ ರಾಜಕೀಯ ಜೀವನದಲ್ಲಿ ಇದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತು ಅವರ ತಮ್ಮ ಸತೀಶ್ಗೌಡ ಇಬ್ಬರೂ ಪರಿಚಯಸ್ಥರು ಹಾಗೂ ಸಂಬಂಧಿಗಳು. ಆದರೆ ಮಗನ ಕೆಲಸದ ವಿಚಾರದಲ್ಲಿ ಯಾರೊಂದಿಗೂ ಹಣದ ವ್ಯವಹಾರ ಮಾಡಿಲ್ಲ ಎಂದ ವೆಂಕಟೇಶ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರಿಚಯ ಕೂಡ ಇದೆ.
ಈ ಹಿಂದೆ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ನಲ್ಲಿದ್ದ ಅವಧಿಯಲ್ಲಿ ನನ್ನ ಮನೆಯಲ್ಲೇ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದರು. ಆದರೆ ಇಂದು ನನ್ನ ಗುರುತು ಹಿಡಿಯುವುದಿಲ್ಲ. ನಾನು ಬಹಳ ಹಿಂದಿನಿಂದಲೂ ರಾಜಕೀಯವಾಗಿ ಗುರುತಿಸಿಕೊಂಡಿದ್ದೇನೆ. ಹಾಗಾಗಿ ಎಲ್ಲ ನಾಯಕರ ಪರಿಚಯ ಇದೆ. ನಮ್ಮ ಮನೆಗೆ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೇರಿ ಹಲವು ರಾಜಕೀಯ ನಾಯಕರು ಭೇಟಿ ನೀಡಿದ್ದಾರೆ.
ಕೋವಿಡ್-19 ಲಸಿಕೆ ಪಡೆಯಲು ಯಾರನ್ನೂ ಒತ್ತಾಯಿಸುವಂತಿಲ್ಲ : ಸುಪ್ರಿಂಕೋರ್ಟ್ ಮಹತ್ವದ ತೀರ್ಪು
1994ರಿಂದಲೂ ರಾಜಕೀಯದಲ್ಲಿ ಇದ್ದೇನೆ, 1994ರಲ್ಲಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದೆ. ನಂತರ ಕಾಂಗ್ರೆಸ್ಗೆ ಸೇರ್ಪಡೆಯಾದೆ. 2004ರಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದೆ. ಪ್ರಸ್ತುತ ಜೆಡಿಎಸ್ನಲ್ಲಿದ್ದೇನೆ ಎಂದು ವೆಂಕಟೇಶ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ