PSI ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ: ಮತ್ತಿಬ್ಬರ ಬಂಧನ, ಬಂಧಿತರ ಸಂಖ್ಯೆ 12ಕ್ಕೇರಿಕೆ

ಕಲಬುರಗಿ:

ಕಲಬುರಗಿ, ಎ.22: PSI ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.ವಿಶಾಲ್ ಶಿರೂರ ಹಾಗೂ ಅಫ್ಝಲ್ ಪುರದ ಶರಣಬಸಪ್ಪ ಬಂಧಿತ ಆರೋಪಿಗಳಾಗಿದ್ದಾರೆ.

ಅಮೆರಿಕ ಎಚ್ಚರಿಕೆ ಕೊಟ್ಟರು ಡೋಂಟ್ ಕೇರ್ ಭಾರತ ಡಬಲ್ ಡೋಸ್!

ಈ ಪೈಕಿ ವಿಶಾಲ್ ಶಿರೂರ ಹಗರಣದ ಕೇಂದ್ರಸ್ಧಾನವಾದ ಇಲ್ಲಿನ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಿಎಸ್ಸೈ ನೇಮಕಾತಿ ಪರೀಕ್ಷೆ ಬರೆದಿರುವ ಅಭ್ಯರ್ಥಿಯಾಗಿದ್ದಾನೆ. ಶರಣಬಸಪ್ಪ ಗುರುವಾರ ಬಂಧಿತ ಶಾಸಕ ಎಂ.ವೈ.ಪಾಟೀಲ ಅವರ ಗನ್‌ಮ್ಯಾನ್ ಹಯ್ಯಾಳಿ ದೇಸಾಯಿಗೆ ಅಕ್ರಮ ನಡೆಸಲು ಸಹಕರಿಸಿದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಧಾನಿ ಮೋದಿ ಭೇಟಿಗೆ ಕ್ಷಣಗಣನೆ; ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿ, ಓರ್ವ ಯೋಧ ಹುತಾತ್ಮ, ,4 ಮಂದಿಗೆ ಗಾಯ

ವಿಶಾಲ್ ಪರೀಕ್ಷೆಯ ವೇಳೆ ಬ್ಲೂಟೂತ್‌ ಬಳಸಿರುವ ಬಗ್ಗೆ ಸಿಐಡಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.ಇದರೊಂದಿಗೆ ಹಗರಣ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಇದುವರೆಗೆ ಪರೀಕ್ಷೆಯಲ್ಲಿ ಒಎಂಆರ್ ಶೀಟಿನಲ್ಲಿ ಅಕ್ರಮ ನಡೆಸಿದ ತನಿಖೆ ನಡೆಯುತ್ತಿತ್ತು. ಇದೀಗ ಪ್ರಕರಣ ಮಹತ್ವದ ತಿರುವು ಪಡೆದುಕೊಳ್ಳುವ ಸಂಭವ ಕಾಣಿಸುತ್ತಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link