ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ!

ಬೆಂಗಳೂರು :

     ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

     ಈ ಹಿಂದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಆದರೆ ಇದೀಗ ಆನ್‌ಲೈನ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದೆ.

     ಎಲ್ಲಾ ಕಾಲೇಜುಗಳಿಗೆ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆನ್‌ಲೈನ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಎರಡು ವಿಷಯಗಳಿಗೆ ಪರೀಕ್ಷೆ ನೀಡಲು ಸೂಚನೆ ನೀಡಲಾಗಿದೆ.

ಪರೀಕ್ಷಾ ವಿಧಾನ :

     ಇಲಾಖೆಯ ವೆಬ್‌ಸೈಟ್‌ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳು ಡೌನ್‌ಲೋಡ್ ಮಾಡಿಕೊಂಡು ಉತ್ತರ ಬರೆದು ವಾಟ್ಸ್‌ಆಪ್, ಇಮೇಲ್ ಅಂಚೆ ಮೂಲಕ ಉಪನ್ಯಾಸಕರಿಗೆ ಉತ್ತರ ಪತ್ರಿಕೆ ಕಳುಹಿಸಬೇಕು.

     ವಿದ್ಯಾರ್ಥಿಗಳು ಕಳುಹಿಸಿದ ಉತ್ತರ ಪತ್ರಿಕೆಗಳನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ Students Achievement Tracking System ನಲ್ಲಿ ಫಲಿತಾಂಶವನ್ನು ಅಪ್‌ಲೋಡ್ ಮಾಡಬೇಕು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap