ಬೆಂಗಳೂರು:
ಪುಲ್ವಾಮ ಭಯೋತ್ಪಾದಕರ ದಾಳಿ ಖಂಡಿಸಿ ಮತ್ತು ಭಯೋತ್ಪಾದನೆ ನಿರ್ಮೂಲನಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಫೆ. 19ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದೆ.
ದೇಶದ ಸೈನಿಕರಿಗಾಗಿ ಪ್ರಪ್ರಥಮವಾಗಿ ಬಂದ್‌ಗೆ ಕರೆ ನೀಡಿದ್ದೇವೆ. ಬೀದರ್ ನಿಂದ ಬೆಂಗಳೂರು, ಕೋಲಾರದಿಂದ ಮಂಗಳೂರುವರೆಗೆ ಬಂದ್ ಆಚರಿಸಬೇಕು.ಆರು ಕೋಟಿ ಕನ್ನಡಿಗರು ಪ್ರತಿಕಾರಕ್ಕಾಗಿ ಕಾಯ್ತಾ ಇದಾರೆ. ಪಕ್ಷ ಭೇದ ಮರೆತು ಎಲ್ಲಾ ಪಕ್ಷಗಳು ಒಂದಾಗಿವೆ. ಈ ಕೃತ್ಯ ಖಂಡಿಸಿ ಭಯೊತ್ಪಾದನೆ ಇರಬಾರದು ಅಂತಾ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10ಕ್ಕೆ ಇಲ್ಲಿನ ಟೌನ್ ಹಾಲ್‌ನಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಮೆರವಣಿಗೆ ಮಾಡಲಾಗುತ್ತದೆ. ಆಸ್ಪತ್ರೆ, ಮಾಧ್ಯಮಗಳು, ಔಷಧಿ, ಹಾಲು ಮಾರಾಟಕ್ಕೆ ವಿನಾಯಿತಿ ಇರುತ್ತದೆ ಎಂದು ಅವರು ಹೇಳಿದರು.
ಕೈಗಾರಿಕಾ ಸಂಘಟನೆಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ನೌಕರರ ಸಂಘ, ಸರ್ಕಾರಿ ನೌಕರರ ಸಂಘ, ರಸ್ತೆ ಸಾರಿಗೆ ಸಂಸ್ಥೆ ಕಾರ್ಮಿಕರ ಸಂಘ ಸೇರಿದಂತೆ ಹಲವು ಸಂಘಟನೆಗಳಿಂದ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಎನ್‌ಇಕೆಆರ್‌ಟಿಸಿ ನೌಕರರಿಂದ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.
ಬಸ್‌ಗಳು, ಸಿನಿಮಾ, ಖಾಸಗಿ ವಾಹನಗಳು ಬಂದ್ ಆಗಲಿವೆ. ಹೋಟೆಲ್, ಖಾಸಗಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಶಾಲಾ ಕಾಲೇಜ್ ಬಂದ್ ಆಗಲಿವೆ. ಬಿಡಿಎ, ಬಿಬಿಎಂಪಿ ಎಲ್ಲಾ ಕಾರ್ಖಾನೆಗಳು, ಐಟಿ-ಬಿಟಿ ಬಂದ್ ಆಗ್ಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯಬಾರದು. ಅಂದು ಎಲ್ಲರೂ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ವಾಟಾಳ್ ಮನವಿ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ