ಬೆಲೆ ಕಟ್ಟಾಲಾಗದ ಕರ್ನಾಟಕದ ಬೆಟ್ಟದ ಹೂ ಎಂದೇ ಖ್ಯಾತರಾದ ಪುನಿತ್‌ ರಾಜ್‌ ಕುಮಾರ್‌ ಅವರಿಗೆ ಹುಟ್ಟು ಹಬ್ಬದಶುಭಾಷಯಗಳು

    ‘ಪವರ್ ಸ್ಟಾರ್’ ಪುನೀತ್ ರಾಜ್​ಕುಮಾರ್​   ಅವರು ನಮ್ಮೊಂದಿಗೆ ಇದ್ದಿದ್ದರೆ ಇಂದು (ಮಾರ್ಚ್​ 17) ಅದ್ದೂರಿಯಾಗಿ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿತ್ತು. ಈಗ ಅವರಿಲ್ಲದೇ ಜನ್ಮದಿನ ಆಚರಿಸುವಂತಾಗಿದೆ. ಪ್ರತಿ ವರ್ಷ ಮಾರ್ಚ್​ 17 ಬಂತೆಂದರೆ ಅಭಿಮಾನಿಗಳು ಸಂಭ್ರಮಿಸುತ್ತಾರೆ. ಪುನೀತ್ ರಾಜ್​ಕುಮಾರ್ ಬರ್ತ್​ಡೇ   ಪ್ರಯುಕ್ತ ಹಲವಾರು ಬಗೆಯ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತದೆ. ಈ ಬಾರಿ ಕೂಡ ಅದು ಮುಂದುವರಿದಿದೆ. ಅಪ್ಪು ಅಭಿಮಾನಿಗಳು ಅನ್ನದಾನ, ರಕ್ತದಾನ, ನೇತ್ರದಾನ ನೋಂದಣಿ ಸೇರಿದಂತೆ ಅನೇಕ ಬಗೆಯ ಕಾರ್ಯಗಳನ್ನು ಕೈಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೂಡ ಪುನೀತ್ ಅವರಿಗೆ ಜನ್ಮದಿನದ ಶುಭಾಶಯ ಕೋರುವ ಮೂಲಕ ಸ್ಮರಿಸಲಾಗುತ್ತಿದೆ.

 
   ಇದು 50ನೇ ವರ್ಷದ ಹುಟ್ಟುಹಬ್ಬ ಆದ್ದರಿಂದ ಪುನೀತ್ ರಾಜ್​​ಕುಮಾರ್​ ಅವರು ಮೊದಲ ಸಿನಿಮಾ ‘ಅಪ್ಪು’ ಮರು ಬಿಡುಗಡೆ ಆಗಿದೆ. ಕಳೆದ ಶುಕ್ರವಾರ (ಮಾರ್ಚ್​ 14) ರೀ-ರಿಲೀಸ್ ಆದ ‘ಅಪ್ಪು’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಆ ಮೂಲಕ ಅಪ್ಪು ಮೇಲಿನ ಅಭಿಮಾನ ಎಂದಿಗೂ ಕಡಿಮೆ ಆಗಲ್ಲ ಎಂಬುದನ್ನು ಫ್ಯಾನ್ಸ್ ಸಾಬೀತು ಮಾಡಿದ್ದಾರೆ. ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ರಮ್ಯಾ, ಶರ್ಮಿಳಾ ಮಾಂಡ್ರೆ, ಸಂತೋಷ್ ಆನಂದ್​ ರಾಮ್​, ರಕ್ಷಿತಾ ಪ್ರೇಮ್, ಯುವ ರಾಜ್​​ಕುಮಾರ್​ ಸೇರಿದಂತೆ ಹಲವರು ಸಿನಿಮಾ ನೋಡಿದ್ದಾರೆ.
   ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿ ಕೂಡ ಪುನೀತ್ ರಾಜ್​ಕುಮಾರ್​ ಅವರು ಸಕ್ರಿಯರಾಗಿದ್ದರು. ‘ಪಿಆರ್​ಕೆ ಪ್ರೊಡಕ್ಷನ್ಸ್’ ಮೂಲಕ ಅವರು ಮಹತ್ವದ ಸಿನಿಮಾಗಳನ್ನು ನಿರ್ಮಿಸುವ ಗುರಿ ಹೊಂದಿದ್ದರು. ಆ ಕಾಯಕವನ್ನು ಈಗ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಮುಂದುವರಿಸುತ್ತಿದ್ದಾರೆ. ಇಂದು ಜನ್ಮದಿನದ ಪ್ರಯುಕ್ತ ಅನೇಕರು ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಡಾ. ರಾಜ್​​ಕುಮಾರ್​ ಕುಟುಂಬದವರು ಕೂಡ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

Recent Articles

spot_img

Related Stories

Share via
Copy link