ಪ್ರತಿಭಟನೆಯಲ್ಲಿ ರೈತನ ಸಾವು : ಪಂಜಾಬ್‌ ಸರ್ಕಾರದಿಂದ ಪರಿಹಾರ ಘೋಷಣೆ….!

ಚಂಡೀಗಢ:

    ವಿವಿಧ ಭೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವೇಳೆ ಖಾನೌರಿ ಗಡಿಯಲ್ಲಿ ಸಾವಿಗೀಡಾದ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಘೋಷಿಸಿದ್ದಾರೆ. 

    ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿ ಗಡಿಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಸಾವಿಗೀಡಾಗಿದ್ದು, 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. 

    ‘ಖಾನೌರಿ ಗಡಿಯಲ್ಲಿ ನಡೆದ ರೈತರ ಪ್ರತಿಭಟನೆ ವೇಳೆ ಹುತಾತ್ಮರಾದ ಶುಭಕರನ್ ಸಿಂಗ್ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ 1 ಕೋಟಿ ರೂ. ಆರ್ಥಿಕ ನೆರವು ಹಾಗೂ ಅವರ ತಂಗಿಗೆ ಸರ್ಕಾರಿ ನೌಕರಿ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಮಾನ್ ಪಂಜಾಬಿಯಲ್ಲಿ ಪೋಸ್ಟ್ ಮಾಡಿದ್ದಾರೆ.

Recent Articles

spot_img

Related Stories

Share via
Copy link
Powered by Social Snap