ಬೆಂಗಳೂರು
ಕಾಂಗ್ರೆಸ್ ಪಕ್ಷದ ದುರಾಡಳಿತ, ಭ್ರಷ್ಟಾಚಾರವನ್ನು ಬಿಜೆಪಿ ಬಯಲಿಗೆಳೆಯಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸೋಮವಾರ ಹೇಳಿದರು.ಬೆಳಗಾವಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೋಮವಾರ ನಡೆದಿದ್ದು, ಸಭೆಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ರೈತ ವಿರೋಧಿ ಆಡಳಿತದ ವಿರುದ್ಧ ಹೋರಾಟ ನಡೆಸುವ ಕುರಿತು ಚರ್ಚೆ ನಡೆದಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಅವರು, ರಾಜ್ಯವನ್ನು ಕಾಡುತ್ತಿರುವ ಹಲವಾರು ಸಮಸ್ಯೆಗಳ ಕುರಿತು ಉತ್ತರದಾಯಿತ್ವಕ್ಕೆ ಒತ್ತಾಯಿಸಿ ಪ್ರತಿಪಕ್ಷಗಳು ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಲಿಗ ಎಂದು ಹೇಳಿದರು.
ಸರಕಾರದ ನಿರ್ಲಕ್ಷ್ಯದಿಂದ ಕರ್ನಾಟಕದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆಗಳು ಹಾಳಾಗಿವೆ, ಆಸ್ಪತ್ರೆಗಳು ತೀವ್ರ ಔಷಧದ ಕೊರತೆಯನ್ನು ಎದುರಿಸುತ್ತಿವೆ. ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಭಾರೀ ಮಳೆಯ ನಂತರವೂ ಈ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿದೆ. ಅಧಿವೇಶನದಲ್ಲಿ ಈ ಬಗ್ಗೆ ಪ್ರಶ್ನೆ ಎತ್ತಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಭ್ರಷ್ಟಾಚಾರ ವಿಚಾರ ಕುರಿತು ಮಾತನಾಡಿದ ಅವರು, ಹಣವಿಲ್ಲದೇ ಯಾವುದೇ ಕೆಲಸಗಳಾಗುತ್ತಿಲ್ಲ. ಕಾಮಗಾರಿ ಗುತ್ತಿಗೆ ಪಡೆಯಲು ಗುತ್ತಿಗೆದಾರರು ಅಧಿಕಾರಿಗಳಿಗೆ ಬಹಿರಂಗವಾಗಿ ಲಂಚ ನೀಡುತ್ತಿದ್ದಾರೆ. ಶಾಸಕರ ಮೇಲಿನ ಗೌರವ ಸಂಪೂರ್ಣ ಹಾಳಾಗಿದೆ. ಭ್ರಷ್ಟಾಚಾರವು ಬೇರುಬಿಟ್ಟಿದೆ, ಇದು ರಾಜ್ಯದ ಪ್ರಗತಿಯನ್ನು ಉಸಿರುಗಟ್ಟಿಸುತ್ತಿದೆ ಎಂದರು.
ಅಧಿವೇಶನದಲ್ಲಿ ಕೃಷ್ಣಾ ಯೋಜನೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮೇಲೆ ಪರಿಣಾಮ ಬೀರುವ ತೀವ್ರ ಹಣಕಾಸಿನ ಬಿಕ್ಕಟ್ಟುಸ ನೀರಿನ ಯೋಜನೆಗಳಿಗೆ ಹಣದ ಕೊರತೆ, ಭ್ರಷ್ಟಾಚಾರ, ದುರಾಡಳಿತ, ಸರ್ಕಾರದ ನಿರ್ಲಕ್ಷದಿಂದ ರೈತರ ಹಾಗೂ ಅವರ ಮಕ್ಕಳ ಸಾವು ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಗುತ್ತದೆ. ಅಧಿವೇಶನಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶಿಸಲಿದೆ ಎಂದು ಹೇಲಿದರು.
ವಿಜಯೇಂದ್ರ ಅವರೂ ಬೆಂಬಲ ನೀಡಿದ್ದಾರೆ. ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರಂತಹ ಕೆಲವು ಸದಸ್ಯರ ಗೈರುಹಾಜರಿಯ ಹೊರತಾಗಿಯೂ, ಕಾಂಗ್ರೆಸ್ ವೈಫಲ್ಯವನ್ನು ಬಹಿರಂಗಪಡಿಸಲು ಪಕ್ಷವು ಒಗ್ಗಟ್ಟಾಗಿದೆ ಎಂದು ಅಶೋಕ್ ಒತ್ತಿ ಹೇಳಿದರು