IPL 2022:
ಹಿಂದಿನ ಸೀಸನ್ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಈ ಬಾರಿ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಚೊಚ್ಚಲ ಗೆಲುವಿಗಾಗಿ ಹಾತೊರೆಯುತ್ತಿದೆ. ಕಳೆದ ಬಾರಿಯ ವಿನ್ನರ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆಡಿದ ನಾಲ್ಕೂ ಪಂದ್ಯಗಳಲ್ಲಿ ಸೋಲುಂಡು ಕೆಟ್ಟ ದಾಖಲೆ ಬರೆದಿದೆ.
ಶನಿವಾರ ನಡೆದ ಪಂದ್ಯದಲ್ಲೂ ಮುಂಬೈ-ಚೆನ್ನೈ ಮತ್ತೆ ಸೋಲಿನ ಮುಖ ಮಾಡಿದೆ. ಇನ್ನು ಎರಡು ಹೊಸ ತಂಡಗಳಾದ ಲಖನೌ ಸೂಪರ್ ಜೇಂಟ್ಸ್ ಮತ್ತು ಗುಜರಾತ್ ಟೈಟನ್ಸ್ ಟೀಮ್ ಕೂಡ ನಿರೀಕ್ಷೆಗೆ ತಕ್ಕ ಆಟವಾಡುತ್ತಿದೆ. ಇದರ ನಡುವೆ ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. IPL 2022 Point Table ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.
ಪಾಯಿಂಟ್ ಟೇಬಲ್:
- ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲ ಸ್ಥಾನದಲ್ಲಿ ಭದ್ರವಾಗಿದೆ. ಆಡಿದ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ಒಂದರಲ್ಲಿ ಸೋಲು ಕಂಡು ಒಟ್ಟು 6 ಅಂಕದೊಂದಿಗೆ +1.102 ರನ್ರೇಟ್ನೊಂದಿಗೆ ಟಾಪ್ನಲ್ಲಿದೆ.
- ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿ ನಾಲ್ಕನೇ ಸ್ಥಾನದಲ್ಲಿದ್ದ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯದಲ್ಲಿ ಮೂರರಲ್ಲೂ ಗೆದ್ದು ಬೀಗಿದೆ. ಗುಜರಾತ್ ನಿವ್ವಳ ರನ್ ರೇಟ್ +0.349.
- ಐದನೇ ಸ್ಥಾನದಲ್ಲಿದ್ದ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ವಿರುದ್ಧದ ಗೆಲುವಿನ ಬಳಿಕ ಮೂರನೇ ಸ್ಥಾನಕ್ಕೆ ಜಿಗಿದಿದೆ. ಆರು ಅಂಕದೊಂದಿಗೆ RCB ನಿವ್ವಳ ರನ್ ರೇಟ್ 0.294 ಆಗಿದೆ.
- ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಒಟ್ಟು 6 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ -0.256.
- ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಇದೀಗ ಐದನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡರಲ್ಲೂ ಗೆಲುವು ಸಾಧಿಸಿ ಒಟ್ಟು 4 ಅಂಕದೊಂದಿಗೆ +1.218 ರನ್ರೇಟ್ ಹೊಂದಿದೆ.
- ಗುಜರಾತ್ ವಿರುದ್ಧದ ಸೋಲಿನ ಬಳಿಕ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಆರನೇ ಸ್ಥಾನದಲ್ಲಿದೆ. ಪಂಜಾಬ್ ನಿವ್ವಳ ರನ್ ರೇಟ್ 0.152 ಆಗಿದೆ.
- ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಡೆಲ್ಲಿಯ ನಿವ್ವಳ ರನ್ ರೇಟ್ -0.116 ಆಗಿದೆ.
- ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ಆಡಿದ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಜಯ ಸಾಧಿಸಿದ್ದು 2 ಅಂಕ ಸಂಪಾದಿಸಿ ಎಂಟನೇ ಸ್ಥಾನದಲ್ಲಿದೆ. ಹೈದರಾಬಾದ್ ನಿವ್ವಳ ರನ್ ರೇಟ್ 0.889.
- ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ ನಾಲ್ಕೂ ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.181.
- ಇತ್ತ ಆಡಿದ ನಾಲ್ಕು ಪಂದ್ಯಗಳಲ್ಲಿ ನಾಲ್ಕರಲ್ಲೂ ಸೋಲು ಕಂಡಿರುವ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ -1.211 ರನ್ರೇಟ್ನೊಂದಿಗೆ ಕೊನೆಯ ಸ್ಥಾನದಲ್ಲಿದೆ.
ಹೈದರಾಬಾದ್ ತಂಡಕ್ಕೆ ಗುಜರಾತ್ ಸವಾಲು! ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್ XI?
ಆರೆಂಜ್ ಕ್ಯಾಪ್:
ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್ ಆರ್ ತಂಡದ ಜೋಸ್ ಬಟ್ಲರ್ ಇದ್ದು ಇವರು ಮೂರು ಪಂದ್ಯಗಳಿಂದ 205 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಎರಡನೇ ಸ್ಥಾನಕ್ಕೆ ಗುಜರಾತ್ ತಂಡದ ಶುಭ್ಮನ್ ಗಿಲ್ ಜಿಗಿದಿದ್ದು 180 ರನ್ ಸಿಡಿಸಿದ್ದಾರೆ. ಮುಂಬೈ ತಂಡದ ಇಶಾನ್ ಕಿಶನ್ ಮೂರನೇ ಸ್ಥಾನಕ್ಕೆ ಜಿಗಿದಿದ್ದು 175 ರನ್ ಕಲೆಹಾಕಿದ್ದಾರೆ. ಪಂಜಾಬ್ ತಂಡದ ಲಿಯಾಮ್ ಲಿವಿಂಗ್ಸ್ಟೋನ್ 162 ರನ್ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಲಖನೌ ತಂಡದ ಕ್ವಿಂಟನ್ ಡಿಕಾಕ್ ಐದನೇ ಸ್ಥಾನಕ್ಕ ಕುಸಿದಿದ್ದು, ಇವರು 149 ರನ್ ಬಾರಿಸಿದ್ದಾರೆ.
ಸತತ 4 ಪಂದ್ಯ ಸೋತ ಮುಂಬೈ ಇಂಡಿಯನ್ಸ್ ತಂಡಕ್ಕೆ ನೀತಾ ಅಂಬಾನಿಯಿಂದ ವಿಶೇಷ ಸಂದೇಶ
ಪರ್ಪಲ್ ಕ್ಯಾಪ್:
ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಉಮೇಶ್ ಯಾದವ್ ಅಗ್ರಸ್ಥಾನದಲ್ಲಿ ಭದ್ರವಾಗಿದ್ದಾರೆ. ಆಡಿದ ಮೂರು ಪಂದ್ಯಗಳಲ್ಲಿ ಇವರು ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 9 ವಿಕೆಟ್ ಕಬಳಿಸಿದ್ದಾರೆ. ಆರ್ಸಿಬಿ ತಂಡದ ವನಿಂದು ಹಸರಂಗ ಎರಡನೇ ಸ್ಥಾನಕ್ಕೆ ಜಿಗಿದಿದ್ದು, ಇವರು ಆಡಿದ ನಾಲ್ಕು ಪಂದ್ಯಗಳಿಂದ 8 ವಿಕೆಟ್ ಕಿತ್ತಿದ್ದಾರೆ. ರಾಜಸ್ಥಾನ್ ತಂಡದ ಯುಜ್ವೇಂದ್ರ ಚಹಲ್ 3 ಪಂದದ್ಯಗಳಿಂದ 7 ವಿಕೆಟ್ ಕಿತ್ತು ಮೂರನೇ ಸ್ಥಾನದಲ್ಲಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ರಾಹುಲ್ ಚಹರ್ ಕೂಡ 7 ವಿಕೆಟ್ ಕಿತ್ತು ನಾಲ್ಕನೇ ಸ್ಥಾನದಲ್ಲಿದ್ದು, 7 ವಿಕೆಟ್ ಕಿತ್ತ ಕುಲ್ದೀಪ್ ಆವೇಶ್ ಖಾನ್ ಐದನೇ ಸ್ಥಾನದಲ್ಲಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ