ಬೆಂಗಳೂರು:
ರಾಜ್ಯದಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ವಿಪಕ್ಷ ನಾಯಕನ ಆಯ್ಕೆ ಬಿಜೆಪಿಗೆ ಕಗ್ಗಂಟಾಗಿದೆ.
ವಿಪಕ್ಷ ನಾಯಕನ ಆಯ್ಕೆ ಸಂಬಂಧ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದು, ರಾಜ್ಯದ ರಾಜಕೀಯ ಪರಿಸ್ಥಿತಿಗಳನ್ನು ವಿವರಿಸಿದ್ದಾರೆ.
ಹಿರಿಯ ಬಿಜೆಪಿ ನಾಯಕ ವಿನೋದ್ ತಾವ್ಡೆ, ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಅವರು ಬೆಂಗಳೂರಿನ ಬಿಜೆಪಿ ಕಚೇರಿಗೆ ಆಗಮಿಸಲಿದ್ದು, ಮಂಗಳವಾರ ಜೂ.04 ರಂದು ಪಕ್ಷದ 66 ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಿ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಈ ಬಳಿಕ ವಿಪಕ್ಷ ನಾಯಕನ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.