ಕಾಂಗ್ರೆಸ್‌ ಗೆ ಗುಡ್‌ ಬೈ ಹೇಳಿದ ರಾಧಿಕಾ ಖೇರಾ..: ಕಾರಣ ಗೊತ್ತಾದ್ರೆ ಷಾಕ್‌ ಆಗೋದು ಪಕ್ಕಾ….!

ರಾಯಪುರ:

     ಛತ್ತೀಸ್‌ಗಢದ ಕಾಂಗ್ರೆಸ್ ನಾಯಕಿ ಹಾಗೂ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ  ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ರಾಜೀನಾಮೆ ಜೊತೆಗೆ ಗಂಭೀರ ಆರೋಪಗಳನ್ನೂ ಮಾಡಿದ್ದಾರೆ.

    ರಾಜ್ಯ ಘಟಕದಲ್ಲಿ ತನ್ನನ್ನು ಅಗೌರವಿಸಲಾಗಿದೆ ಎಂದು ಪತ್ರದಲ್ಲಿ ರಾಧಿಕಾ ಆರೋಪಿಸಿದ್ದಾರೆ. ತಮ್ಮ ಪತ್ರವನ್ನು X ನಲ್ಲಿ ಪೋಸ್ಟ್ ಮಾಡಿದ್ದಾರೆ. 

    ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕೆ ಮಾತುಗಳನ್ನು ಕೇಳಬೇಕಾಯಿತು. ರಾಮಲಲ್ಲಾ ಮೂರ್ತಿಯ ದರ್ಶನ ಪಡೆದ ಕಾರಣ ಪಕ್ಷದೊಳಗೆ ಟೀಕೆಗಳನ್ನು ಎದುರಿಸಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾರೆ. ಪಕ್ಷದೊಳಗೆ ಪುರುಷ ಕೋಮುವಾದಿ ಮನಸ್ಥಿತಿಯಿಂದ ಬಳಲುತ್ತಿರುವವರನ್ನು ಬಹಿರಂಗಪಡಿಸುವುದಾಗಿ ಹೇಳಿದ್ದಾರೆ. ಮೂರನೇ ಹಂತದ ಲೋಕಸಭೆ ಚುನಾವಣೆಗೆ ಕೇವಲ 2 ದಿನಗಳಿರುವಾಗ ರಾಧಿಕಾ ಅವರ ಆರೋಪಗಳು ಸಾಕಷ್ಟು ಮಹತ್ವ ಪಡೆದುಕೊಂಡಿದೆ. 

    ಇಂದು ಅತ್ಯಂತ ನೋವಿನಿಂದ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ತ್ಯಜಿಸುತ್ತಿದ್ದೇನೆ. ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಹೌದು, ನಾನು ಹುಡುಗಿ, ನಾನು ಹೋರಾಡಬಲ್ಲೆ. ನನಗೆ ಮತ್ತು ನನ್ನ ದೇಶವಾಸಿಗಳಿಗೆ ನ್ಯಾಯಕ್ಕಾಗಿ ನಾನು ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಬರೆದಿದ್ದಾರೆ.

   ನಾನು ನನ್ನ ಜೀವನದ 22 ವರ್ಷಗಳಿಗಿಂತ ಹೆಚ್ಚು ಸಮಯವನ್ನು ಕಾಂಗ್ರೆಸ್​ ಪಕ್ಷಕ್ಕೆ ನೀಡಿದ್ದೇನೆ. NSUI ನಿಂದ ಕಾಂಗ್ರೆಸ್‌ನ ಮಾಧ್ಯಮ ವಿಭಾಗದವರೆಗೆ ಪ್ರಾಮಾಣಿಕತೆವಾಗಿ ಕೆಲಸ ಮಾಡಿದ್ದೇನೆ. ಆದರೂ, ನಾನು ಅಯೋಧ್ಯೆ ರಾಮನನ್ನು ಬೆಂಬಲಿಸುತ್ತಿರುವ ಕಾರಣ ತೀವ್ರ ವಿರೋಧವನ್ನು ಎದುರಿಸಬೇಕಾಯಿತು. ಛತ್ತೀಸ್‌ಗಢ ಕಾಂಗ್ರೆಸ್ ಘಟಕದಲ್ಲಿ ತನ್ನನ್ನು ಅಗೌರವಿಸಲಾಗಿದೆ. ತನಗೆ ನ್ಯಾಯವನ್ನು ನಿರಾಕರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap