ದೆಹಲಿ:

ಫ್ರಾನ್ಸ್ ಕಂಪೆನಿ ಡಸೌಲ್ಟ್ ಏವಿಯೇಶನ್‌ನೊಂದಿಗೆ ರಫೆಲ್ ಫೈಟರ್ ಜೆಟ್ ವಿಮಾನ ಖರೀದಿ ಒಪ್ಪಂದದ ನಿರ್ಧಾರ ಪ್ರಕ್ರಿಯೆ ಕುರಿತ ಸಂಪೂರ್ಣ ವಿವರವನ್ನು ಮುಚ್ಚಿದ ಲಕೋಟೆಯಲ್ಲಿ ಅಕ್ಟೋಬರ್ 29ರ ಒಳಗೆ ತನಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಇಂದು ಕೇಂದ್ರ ಸರಕಾರಕ್ಕೆ ಆದೇಶಿಸಿದೆ.
ರಫೇಲ್ ಒಪ್ಪಂದದ ವಿರುದ್ಧ ಪಿಐಎಲ್ : ಬುಧವಾರ ವಿಚಾರಣೆ
ರಫೆಲ್ ಒಪ್ಪಂದದ ಕುರಿತು ತನಿಖೆ ನಡೆಸುವಂತೆ ಕೋರಿ 2 ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾಗಿದೆ.
ರಫೇಲ್ ಫೈಟರ್ ಜೆಟ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳನ್ನು ತಾನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ಗಳಾದ ಎಸ್.ಕೆ.ಕೌಲ್ ಮತ್ತು ಕೆ.ಎಂ.ಜೋಸೆಫ್ ರವರನ್ನು ಒಳಗೊಂಡ ಸುಪ್ರೀಂ ಪೀಠ ಹೇಳಿತು.
ಸಾರ್ವನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಅಕ್ಟೋಬರ್ 31ಕ್ಕೆ ನಿಗದಿಯಾಗಿದ್ದು, ಅಕ್ಟೋಬರ್ 29ರೊಳಗೆ ಮಾಹಿತಿಯನ್ನು ಸಲ್ಲಿಸಬೇಕು ಎಂದು ಕೋರ್ಟ್ ಸೂಚಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








