ಬೆಂಗಳೂರು :
ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಸೇರಿದಂತೆ 5 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸೆ. 16 ಕ್ಕೆ ಮುಂದೂಡಿಕೆಯಾಗಿದೆ.
ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವಂತ ನಟಿ ರಾಗಿಣಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು, ಎನ್ ಡಿ ಪಿ ಎಸ್ ನ್ಯಾಯಾಲಯದಲ್ಲಿ ಇಂದು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆದ್ರೇ ವಿಚಾರಣೆಯನ್ನು ಬಾಕಿ ಉಳಿಸಿ, ಸೆಪ್ಟೆಂಬರ್ 16ಕ್ಕೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಹೀಗಾಗಿ ಇನ್ನೂ ಎರಡು ದಿನ ನಟಿ ರಾಗಿಣಿಗೆ ಬಿಡುಗಡೆ ಭಾಗ್ಯವಿಲ್ಲದಂತಾಗಿದೆ.
ನಟಿ ರಾಗಿಣಿ, ಶಿವಪ್ರಕಾಶ್, ವಿನಯ್ ಕುಮಾರ್, ವೈಭವ್ ಶೆಟ್ಟಿ ಮತ್ತು ರಾಹುಲ್ ಅವರ ಜಾಮೀನು ಅರ್ಜಿಯನ್ನು ಸೆ. 16 ಕ್ಕೆ ಮುಂದೂಡಿ ಎನ್ ಡಿಪಿಎಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
