ಮುಂಬೈ:
ರಾಹುಲ್ ಗಾಂಧಿ ಅನರ್ಹತೆ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಮತ್ತು ಈ ಕ್ರಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಮೊಟಕುಗೊಳಿಸಿದಂತಾಗಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಕೇರಳದ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಹುಲ್,ಅವರನ್ನು ಗುಜರಾತ್‌ನ ಸೂರತ್‌ನ ನ್ಯಾಯಾಲಯದಿಂದ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ ಒಂದು ದಿನದ ನಂತರ ಶುಕ್ರವಾರ ಲೋಕಸಭೆಯಿಂದ ಅನರ್ಹಗೊಳಿಸಲಾಯಿತು.
ಕರ್ನಾಟಕದಲ್ಲಿ 2019ರ ಚುನಾವಣಾ ರ‍್ಯಾಲಿಯಲ್ಲಿ ‘ಮೋದಿ ಉಪನಾಮ’ ಕುರಿತಾದ ಟೀಕೆಗಳಿಗೆ ಸಂಬಂಧಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ನ್ಯಾಯಾಲಯವು ರಾಹುಲ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆದಾಗ್ಯೂ, ನ್ಯಾಯಾಲಯ ಅವರಿಗೆ ಜಾಮೀನು ನೀಡಿದ್ದು, ಮೇಲಿನ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲು 30 ದಿನಗಳವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿದೆ.