ಲಖನೌ:
ಭಾರತೀಯ ಸೈನಿಕರ ಟೀಕೆ ಹಿನ್ನೆಲೆಯಲ್ಲಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಲಖನೌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರಾಹುಲ್ ಗಾಂಧಿ ಖುದ್ದು ನ್ಯಾಯಾಲಯಕ್ಕೆ ಹಾಜರಾದ ನಂತರ ಜಾಮೀನು ಮಂಜೂರು ಮಾಡಲಾಗಿದೆ.
2022 ರಲ್ಲಿ ಅವರ ಭಾರತ್ ಜೋಡೋ ಯಾತ್ರೆ ವೇಳೆ ಭಾರತೀಯ ಸೈನಿಕರ ವಿರುದ್ಧ ಮಾಡಿದ ಮಾನಹಾನಿಕರ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ ಎಂದು ರಾಹುಲ್ ಪರ ವಕೀಲ ಪ್ರಾಂಶು ಅಗರ್ವಾಲ್ ಹೇಳಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ರಾಹುಲ್ ಗಾಂಧಿ ಅವರು ಜಾಮೀನು ಬಾಂಡ್ ಮತ್ತು ಶ್ಯೂರಿಟಿಗಳನ್ನು ಒದಗಿಸಿದ ನಂತರ ಜಾಮೀನು ನೀಡಲಾಯಿತು ಎಂದು ಅವರು ತಿಳಿಸಿದರು.
ವಕೀಲರಿಂದ ತುಂಬಿದ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಹಾಜರಾದರು. ಅವರನ್ನು ನ್ಯಾಯಾಧೀಶರ ಚೆಂಬರ್ ಗೆ ಕರೆದೊಯ್ಯಲಾಯಿತು, ಅಲ್ಲಿ ಬಾಂಡ್ ಮತ್ತು ಶ್ಯೂರಿಟಿ ಸಲ್ಲಿಸುವ ಔಪಚಾರಿಕ ಪ್ರಕ್ರಿಯೆಗಳು ನಡೆದವು.
