ನಮ್ಮ ಕುಟುಂಬ ಯಾವಾಗಲು ನಿಮಗಾಗಿ ಕೆಲಸ ಮಾಡಿದೆ : ರಾಹುಲ್‌ ಗಾಂಧಿ

ರಾಯ್ ಬರೇಲಿ: 

    ನನ್ನ ಕುಟುಂಬ ಯಾವಾಗಲೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಜನರಿಗಾಗಿ ಕೆಲಸ ಮಾಡಿದೆ. ಆದರೆ ಪ್ರಧಾನಿ ಮೋದಿ ಅದಾನಿ ಮತ್ತು ಅಂಬಾನಿ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ವಾಗ್ದಾಳಿ ನಡೆಸಿದರು.

   ನಾಮಪತ್ರ ಸಲ್ಲಿಸಿದ ನಂತರ ಕ್ಷೇತ್ರದಲ್ಲಿ ತಮ್ಮ ಮೊದಲ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ತಮ್ಮ ಕುಟುಂಬವು ಇಲ್ಲಿನ ಜನರೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿರುವ ಕಾರಣದಿಂದ ತಾವು ಈ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಹೇಳಿದರು. 

   ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ, 22 ರಿಂದ 25 ಉನ್ನತ ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಆರೋಪಿಸಿದರು.

    ರಾಯ್ ಬರೇಲಿಯಲ್ಲಿ ತಮ್ಮ ಅಜ್ಜಿ ಇಂದಿರಾ ಗಾಂಧಿ, ತಮ್ಮ ತಂದೆ ರಾಜೀವ್ ಗಾಂಧಿ ಮತ್ತು ತಾಯಿ ಸೋನಿಯಾ ಗಾಂಧಿ ರಾಯ್ ಬರೇಲಿ ಜನರ ಜೀವನವನ್ನು ಸುಧಾರಿಸಲು ಶ್ರಮಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

    ಇದೇ ವೇಳೆ, ರೈತರು ಮತ್ತು ನಿರುದ್ಯೋಗಿ ಯುವಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಮಾಧ್ಯಮಗಳು ತೋರಿಸುತ್ತಿಲ್ಲ ಬದಲಿಗೆ ಉನ್ನತ ಕೈಗಾರಿಕೋದ್ಯಮಿಗಳ ಕುಟುಂಬಗಳ ಮದುವೆ ಕಾರ್ಯಕ್ರಮಗಳಿಗೆ ಪ್ರಾಮುಖ್ಯತೆ ನೀಡುತ್ತಿವೆ ಎಂದು ರಾಹುಲ್ ಗಾಂಧಿ ಕಿಡಿ ಕಾರಿದರು.

    ಗಾಂಧಿ ಕುಟುಂಬದ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿರುವ ರಾಯ್ ಬರೇಲಿ ಕ್ಷೇತ್ರವನ್ನು 2004 ರಿಂದ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದರು. ಈ ಕ್ಷೇತ್ರವನ್ನು ಈ ಹಿಂದೆ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಪ್ರತಿನಿಧಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link