ಡಿ.ಕೆ.ಶಿವಕುಮಾರ್ ಗೆ ಕರೆ ಮಾಡಿದ ರಾಹುಲ್ ಗಾಂಧಿ

ರಾಮನಗರ :

ಪಕ್ಷಕ್ಕೆ ಮುಜುಗರವಾಗದಂತೆ ನಿರ್ಧಾರ ಕೈಗೊಳ್ಳಲು ಸೂಚನೆ

ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಈಗಾಗಲೇ ರಾಜ್ಯ ಸರ್ಕಾರ ಪಾದಯಾತ್ರೆ ನಡೆಸದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಕಾಂಗ್ರೆಸ್ ಪಾದಯಾತ್ರೆಯ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿ ಕರೆ ಮಾಡಿ ಮಾತನಾಡಿದ್ದು, ಮೇಕೆದಾಟು ಪಾದಯಾತ್ರೆಯ ಬಗ್ಗೆ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.

             ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ ಪಕ್ಷಕ್ಕೆ ಮುಜುಗರವಾಗದಂತೆ ನಿರ್ಧಾರ ಕೈಗೊಳ್ಳಿ, ಈಗಾಗಲೇ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕಾಗಿ ವರ್ಚುವಲ್ ಮೂಲಕ ಸಭೆ ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲಾ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಿ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link