ನವದೆಹಲಿ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಖಾತೆಯ ಬಯೋವನ್ನು ಬದಲಾಯಿಸಿದ್ದು ಬಯೋದಲ್ಲಿ ‘ಅನರ್ಹ ಸಂಸದ’ ಎಂದು ಬರೆದುಕೊಂಡಿದ್ದಾರೆ.
ಅವರ ಟ್ವಿಟರ್ ಬಯೋದಲ್ಲಿ ಈಗ, ‘ಇದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಮತ್ತು ಅನರ್ಹ ಸಂಸದ ರಾಹುಲ್ ಗಾಂಧಿಯವರ ಅಧಿಕೃತ ಖಾತೆಯಾಗಿದೆ’ ಎಂದಿದೆ.
‘ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಗಳನ್ನು ಕೇಳಲು ಹೆದರುವುದಿಲ್ಲ’ ಎಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
‘ಶೆಲ್ ಕಂಪನಿಗಳಿಂದ ಹೊರಬಂದ 20,000 ಕೋಟಿ ರೂ. ಯಾರ ಹಣ ಎಂದು ನಾನು ಪ್ರಶ್ನೆಗಳನ್ನು ಕೇಳುವುದನ್ನು ನಿಲ್ಲಿಸುವುದಿಲ್ಲ.
ರಾಷ್ಟ್ರದ ಧ್ವನಿಯನ್ನು ರಕ್ಷಿಸಲು ನಾನು ಇಲ್ಲಿದ್ದೇನೆ. ನಾನು ಜೈಲು ಶಿಕ್ಷೆ, ಅನರ್ಹತೆ ಮತ್ತು ಇತರರಿಗೆ ಹೆದರುವುದಿಲ್ಲ. ನಾನು ಅಂತಹ ವ್ಯಕ್ತಿ ಅಲ್ಲ ಮತ್ತು ಅವರು ನನ್ನನ್ನು ಅರ್ಥಮಾಡಿಕೊಂಡಿಲ್ಲ. ನಾನು ಹಿಂದೆ ಸರಿಯುವ ಮಾತೇ ಇಲ್ಲ ಮತ್ತು ತತ್ವದ ಮೇಲೆ ನಡೆದುಕೊಳ್ಳುತ್ತೇನೆ’ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
