ನವದೆಹಲಿ
ಪ್ರತಿಪಕ್ಷಗಳ ಮೈತ್ರಿಕೂಟ INDIA ದೇಶ ಕಂಡ ಅತ್ಯಂತ ದಿಕ್ಕು ತೋಚದ ಮೈತ್ರಿಕೂಟ ಎಂದು ಟೀಕಿಸಿದ್ದ ಪ್ರಧಾನಿ ಮೋದಿ, ಈಸ್ಟ್ ಇಂಡಿಯಾ ಕಂಪನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಹೆಸರುಗಳನ್ನು ಉಲ್ಲೇಖಿಸಿ, ಕೇವಲ ದೇಶದ ಹೆಸರು ಬಳಸುವುದರಿಂದ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.
‘ನಮ್ಮನ್ನು ನೀವು ಹೇಗೆ ಬೇಕಾದರೂ ಕರೆಯಿರಿ.’ ಆದರೆ ‘ನಾವು INDIA’ ಮತ್ತು ‘ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ತಿರುಗೇಟು ನೀಡಿದ್ದಾರೆ.
ಪ್ರಧಾನಿ ಮೋದಿಗೆ ತಿರುಗೇಟು ನೀಡಿ ಟ್ವೀಟ್ ಮಾಡಿದ ರಾಹುಲ್ ಗಾಂಧಿ: “ಮೋದಿ, ನಿಮಗೆ ಬೇಕಾದ ಹಾಗೆ ನಮ್ಮನ್ನು ಕರೆಯಿರಿ. ಆದರೆ ನಾವು INDIA. ನಾವು ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಸಹಾಯ ಮಾಡುತ್ತೇವೆ ಮತ್ತು ಪ್ರತಿ ಮಹಿಳೆ ಮತ್ತು ಮಗುವಿನ ಕಣ್ಣೀರು ಒರೆಸುತ್ತೇವೆ. ನಾವು ಅವರಿಗೆ ಪ್ರೀತಿ ಮತ್ತು ಶಾಂತಿಯನ್ನು ಮರಳಿ ತರುತ್ತೇವೆ ಎಂದು ಹೇಳಿದ್ದಾರೆ.
“ನಾವು ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ” ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ