ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ : ರಾಹುಲ್‌ ಗಾಂಧಿಗೆ ಸಮನ್ಸ್

ಕ್ನೋ:

    ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಂಸದ-ಶಾಸಕರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಅದ್ರಂತೆ, ಜುಲೈ 2 ರಂದು ಖುದ್ದಾಗಿ ಹಾಜರಾಗುವಂತೆ ಸೂಚಿಸಿದೆ.

   ರಾಮ್ ಪ್ರತಾಪ್ ಎಂಬುವವರು ತಮ್ಮನ್ನು ಈ ಪ್ರಕರಣದಲ್ಲಿ ಭಾಗಿಯನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದರು ಎಂದು ದೂರಿನ ವಕೀಲ ಸಂತೋಷ್ ಕುಮಾರ್ ಪಾಂಡೆ ಹೇಳಿದ್ದಾರೆ.

   ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಮಾನಹಾನಿಕರ ಹೇಳಿಕೆಗಳನ್ನ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು 2018ರಲ್ಲಿ ಈ ಪ್ರಕರಣವನ್ನ ಪ್ರಾರಂಭಿಸಿದ್ದರು.

   ಈ ಪ್ರಕರಣದಲ್ಲಿ ರಾಮ್ ಪ್ರತಾಪ್ ಅವರನ್ನು ಪಕ್ಷಗಾರರನ್ನಾಗಿ ಸೇರಿಸುವ ಮನವಿಯನ್ನು ಗಾಂಧಿ ಅವರ ವಕೀಲ ಕಾಶಿ ಪ್ರಸಾದ್ ಶುಕ್ಲಾ ವಿರೋಧಿಸಿದರು, ಪ್ರತಾಪ್ ನೇರವಾಗಿ ಭಾಗಿಯಾಗಿಲ್ಲ ಎಂದು ಪ್ರತಿಪಾದಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap