ರಾಹುಲ್‌ ಗಾಂಧಿಗೆ ಅಮೇಥಿಯಿಂದ ಸ್ಪರ್ಧಿಸುವ ಧೈರ್ಯವಿಲ್ಲ : ರಾಜನಾಥ್‌ ಸಿಂಗ್‌

ರೋಹ್ಟಕ್:

  ಅಮೇಥಿ ಬದಲಿಗೆ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಅಯ್ಕೆ ಮಾಡಿಕೊಂಡ ರಾಹುಲ್‌ ಗಾಂಧಿ ವಿಚಾರವಾಗಿ  ಚುನಾವಣಾ ಕಣದಿಂದ ಓಡಿ ಹೋಗುವ ವ್ಯಕ್ತಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೇವಡಿ ಮಾಡಿದ್ದಾರೆ. 

   ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ಅಮೇಥಿಯಿಂದ ಸ್ಪರ್ಧಿಸುವ ಧೈರ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು. ಅವರು ದೇಶ ಮುನ್ನಡೆಸಬೇಕು ಎಂದು ಜನರು ಬಯಸಿದ್ದರು. ಅನೇಕ ಕಾಂಗ್ರೆಸ್ ನಾಯಕರು ಕೂಡಾ ಅವರು ಅಮೇಥಿಯಿಂದಲೇ ಸ್ಪರ್ಧಿಸಲಿ ಅಂದುಕೊಂಡಿದ್ದರು. ಆದರೆ, ಅವರು ಹೆದರಿ ಓಡಿ ಹೋಗಿದ್ದಾರೆ ಎಂದು ಟೀಕಿಸಿದರು. ಚುನಾವಣಾ ಕಣದಿಂದ ಓಡಿ ಹೋಗಿದ ಅವರಿಗೆ ಬೇರೆ ಹೆಸರು ಇಡಬೇಕು ಎಂದು ರಾಜನಾಥ್ ಸಿಂಗ್ ಹೇಳಿದರು. 

    ಲೋಕಸಭೆಯಲ್ಲಿ ಮೂರು ಅವಧಿಗೆ ಅಮೇಥಿ ಕ್ಷೇತ್ರವನ್ನು ಪ್ರತಿನಿಧಿಸಿದ ರಾಹುಲ್ ಗಾಂಧಿ 2019 ರಲ್ಲಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. ಆದರೆ ಅವರು ಕೇರಳದ ವಯನಾಡಿನಲ್ಲಿ ಗೆದ್ದಿದ್ದರು. ಪಾಕಿಸ್ತಾನದ ನಾಯಕ ಚೌಧರಿ ಫವಾದ್ ಹುಸೇನ್, ರಾಹುಲ್ ಗಾಂಧಿಯನ್ನು ಹೊಗಳಿದ್ದಕ್ಕಾಗಿ ಸಿಂಗ್ ಅವರು ಕಾಂಗ್ರೆಸ್ ಅನ್ನು ಟೀಕಿಸಿದರು. ಹುಸೇನ್ ಈ ಹಿಂದೆ ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ಬೆಂಬಲಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link