ರಾಹುಲ್‌ ಗಾಂಧಿ ಸಂಸತ್‌ ಸದಸ್ಯತ್ವ ಪುನಃಸ್ಥಾಪನೆ….!

ನವದೆಹಲಿ:

     ಸೂರತ್‌ ನ್ಯಾಯಾಲಯವು ಕಾಂಗ್ರೆಸ್‌ ಮುಖಂಡ ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್‌ ತಡೆಯಾಜ್ಞೆ ವಿಧಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಯವರ ಸಂಸತ್ತ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನಃಸ್ಥಾಪಿಸಿದ್ದಾರೆ.

    ಕೋರ್ಟ್‌ ಆದೇಶ ಪ್ರತಿಯೊಂದಿಗೆ ಶುಕ್ರವಾರವೇ ಲೋಕಸಭಾ ಕಾರ್ಯದರ್ಶಿ ಭೇಟಿ ಮಾಡಿದ್ದ ಕಾಂಗ್ರೆಸ್‌ ನಾಯಕರು, ರಾಹುಲ್‌ ಅನರ್ಹತೆ ಆದೇಶ ರದ್ದು ಮಾಡುವಂತೆ ಮನವಿ ಮಾಡಿದ್ದರು.

    ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‍ನ ಸೂರತ್ ಮ್ಯಾಜಿಸ್ಟ್ರೇಟ್  ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

 

   ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿತ್ತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap