ಮೋದಿ ಉಪನಾಮ ಹೇಳಿಕೆ : ರಾಹುಲ್‌ ಗಾಂಧಿ ಅರ್ಜಿ ವಜಾ…!

ಸೂರತ್:

   ಮೋದಿ ಉಪನಾಮದ  ಹೇಳಿಕೆ  ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

   ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಈ ಹಿಂದೆ ರಾಹುಲ್ ಗಾಂಧಿಯವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದಕ್ಕೆ ನ್ಯಾಯಾಲಯ ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

   ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link