ಅಹಮದಾಬಾದ್
ಮೋದಿ ಎಂಬ ಸರ್‌ನೇಮ್ ಕುರಿತು ಮಾಡಿದ್ದಾರೆ ಎಂಬ ಟೀಕೆ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸೂರತ್ ನ್ಯಾಯಾಲಯವು ದೋಷಿ ಎಂದು ತೀರ್ಪು ಪ್ರಕಟಿಸಿದೆ ಮತ್ತು ಮೇಲ್ಮನವಿ ಸಲ್ಲಿಕೆಗೆ ಅವಕಾಶ ನೀಡಿದೆ .
2019 ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಗುರುವಾರ ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಪ್ರಧಾನಿ ನರೇಂದ್ರ ಮೋದಿಯವರ ಉಪನಾಮದ ಬಗ್ಗೆ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ತೀರ್ಪಿ ನೀಡುವ ವೇಳೆ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
2019ರ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಅವರು “ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಹೇಗೆ ಇರುತ್ತದೆ ಎಂಬುದು ಆಶ್ಚರ್ಯ” ಎಂದು ಹೇಳಿಕೆ ನೀಡಿದ್ದರು. ರಾಹುಲ್ ಗಾಂಧಿ ಅವರು ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.