ಬೆಂಗಳೂರು
2023 ರ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಕಾಂಗ್ರೆಸ್, ಈ ಬಾರಿಯ ಲೋಕಸಮರವನ್ನ ಗೆಲ್ಲುವ ನಿಟ್ಟಿನಲ್ಲಿ ಮಹಾ ರಣತಂತ್ರ ರೆಡಿಯಾಗಿದೆ.
ರಾಜ್ಯದ 28 ಕ್ಷೇತ್ರಗಳ ಫೈಕಿ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಮೋದಿ ಮಾಸ್ಟರ್ ಪ್ಲಾನ್ ಹಾಕಿದ್ದಾರೆ.
ಇತ್ತ ರಾಜ್ಯ ಕಾಂಗ್ರೆಸ್ ನಾಯಕರಿಗೆ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ನೀಡಿದ್ದು, ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಬಾರೀ ಕರ್ನಾಟಕದಲ್ಲಿ ಚುನಾವಣಾ ಪ್ರಚಾರವನ್ನ ಆರಂಭಿಸಿದ್ದು, ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಬುಧವಾರ ಆಗಮಿಸುತ್ತಿದ್ದಾರೆ.
ರಾಹುಲ್ ಗಾಂಧಿ ಅವರ ರಾಜ್ಯ ಭೇಟಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದಿ ಅವರು, ರಾಹುಲ್ ಗಾಂಧಿ ಅವರು ನಾಳೆ (ಬುಧವಾರ) ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ, ನಂತರ ಕೋಲಾರಕ್ಕೆ ಹೋಗಿ ಅಲ್ಲಿಂದ ದೆಹಲಿಗೆ ಹೋಗುತ್ತಾರೆ. ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದು ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಅವರ ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಬಾರೀ ಭೇಟಿ ನೀಡುವ ಮೂಲಕ ತಮ್ಮ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರವನ್ನ ನಡೆಸಿದ್ದು, ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಸಮಾವೇಶವನ್ನ ನಡೆಸಿದ್ದು, ಇದೀಗ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಪ್ರಚಾರ ಕೊನೆಗೂ ಫಿಕ್ಸ್ ಆಗಿದೆ.
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರ ವಿರುದ್ಧವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕಣದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಮಂಡ್ಯ ಕ್ಷೇತ್ರ ಕಾಂಗ್ರೆಸ್‌ಗೆ ಸವಾಲಾಗಿದ್ದು, ಈ ಕಾರಣಕ್ಕಾಗಿ ರಾಹುಲ್ ಗಾಂಧಿ ಮಂಡ್ಯದಲ್ಲೇ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ನಾಳೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಮಧ್ಯಾಹ್ಮ ಮಂಡ್ಯ ಜಿಲ್ಲೆಗೆ ತೆರಳಲಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರ ನಡೆಸಲಿದ್ದಾರೆ. ನಂತರ ಕೋಲಾರ ಜಿಲ್ಲೆಗೆ ತೆರಳಲಿದ್ದಾರೆ. ಕೋಲಾರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಪರ ಅಬ್ಬರದ ಪ್ರಚಾರ ಕಾರ್ಯವನ್ನ ನಡೆಸಲಿದ್ದಾರೆ.
ಇನ್ನೂ ಟಿಕೆಟ್ ಹಂಚಿಕೆ ವಿಚಾರವಾಗಿ ಸಾಕಷ್ಟು ಗೊಂದಲ ಸೃಷ್ಟಿಯಾಗಿದ್ದು,ಕೋಲಾರದಲ್ಲಿ ಕೈ ನಾಯಕರ ಮುನಿಸಿನಿಂದಾಗಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ನಾಯಕರು ರಾಹುಲ್ ಗಾಂಧಿ ಅವರನ್ನ ಕ್ಷೇತ್ರಕ್ಕೆ ಕರೆತರುವ ನಿಟ್ಟಿನಲ್ಲಿ ಅಸಮಾಧಾನ ಶಮನಕ್ಕೆ ಮಾಸ್ಟರ್ ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ