ನವದೆಹಲಿ:
ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ಸೋಮವಾರ ರಾಹುಲ್ ಗಾಂಧಿ ಮತ್ತು ಕೀರ್ತಿನಗರ ಪೀಠೋಪಕರಣ ಮಳಿಗೆಯ ಇತರೆ ಬಡಗಿಗಳು ತಯಾರಿಸಿದ ಡೆಸ್ಕ್‌ಗಳನ್ನು ಕರ್ಕರ್ಡೂಮಾದ ಪ್ರೇಮಲಾ ಬಾಯಿ ಚವಾಣ್ ಶಾಲೆಯ ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಲವ್ಲಿ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ದೀಪಕ್ ಬಬಾರಿಯಾ ಅವರು ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಡೆಸ್ಕ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಅದು ಹೇಳಿದೆ.
ಆ ಶಾಲೆಯು ಈಗ ಕಾಂಗ್ರೆಸ್‌ನೊಂದಿಗೆ ಬಲವಾದ ಬಾಂಧವ್ಯವನ್ನು ಬೆಳೆಸಿಕೊಂಡಿದ್ದು, ಅದರ ಎಲ್ಲಾ ಅವಶ್ಯಕತೆಗಳನ್ನು ಪೂರೈಸಲು ಕಾಂಗ್ರೆಸ್ ಕುಟುಂಬವು ಸಹಾಯ ಮತ್ತು ಬೆಂಬಲವನ್ನು ನೀಡುತ್ತದೆ ಎಂದು ಲವ್ಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಡವರು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮತ್ತು ಅಸಹಾಯಕ ಜನರ ಕಲ್ಯಾಣದ ಬಗ್ಗೆ ರಾಹುಲ್ ಗಾಂಧಿಯವರು ಹೆಚ್ಚು ಕಾಳಜಿ ವಹಿಸುತ್ತಾರೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೆಪ್ಟೆಂಬರ್ 28 ರಂದು ಕೀರ್ತಿನಗರ ಪೀಠೋಪಕರಣ ಅಂಗಡಿಗೆ ಭೇಟಿ ನೀಡಿದ್ದರು. ಈ ವೇಳೆ ಇತರೆ ಬಡಗಿಗಳೊಂದಿಗೆ ಸೇರಿ ಪೀಠೋಪಕರಣಗಳನ್ನು ತಯಾರಿಸಿದ್ದರು ಮತ್ತು ಅವರೊಂದಿಗೆ ಮಾತುಕತೆ ನಡೆಸಿದ್ದರು.