ರಾಹುಲ್ ಗಾಂಧಿಗೆ ಅನಾರೋಗ್ಯದಿಂದ ಬೆಳಗಾವಿ ಸಮಾವೇಶಕ್ಕೆ ಗೈರು: ಕಾಂಗ್ರೆಸ್

ಬೆಂಗಳೂರು:

  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯಪೀಡಿತರಾಗಿರುವ ಕಾರಣ ಬೆಳಗಾವಿಯಲ್ಲಿ ಮಂಗಳವಾರ ನಡೆಯುತ್ತಿರುವ ಗಾಂಧಿ ಭಾರತ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇಲ್ಲ ಎಂದು ಆಡಳಿತ ಪಕ್ಷದ ಮೂಲಗಳು ತಿಳಿಸಿವೆ.

  ಗೃಹ ಸಚಿವ ಜಿ ಪರಮೇಶ್ವರ ಅವರು ಬೆಳಗಾವಿಯಲ್ಲಿ ಸುದ್ದಿಸಂಸ್ಥೆ ಪಿಟಿಐ ಜೊತೆ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಂಪೂರ್ಣ ನಾಯಕತ್ವವು ಬೆಳಗಾವಿಗೆ ಆಗಮಿಸಲಿದ್ದು, ಸಮಾರಂಭದಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಕಾಂಗ್ರೆಸ್ ಹಿರಿಯ ಪದಾಧಿಕಾರಿಗಳು ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

  ಕಾಂಗ್ರೆಸ್ ಮೂಲಗಳ ಪ್ರಕಾರ, ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸಲು ನಿರ್ಧರಿಸಲಾಗಿದೆ. ಸಿಪಿಇಡಿ ಮೈದಾನದಲ್ಲಿ ಸಾರ್ವಜನಿಕ ಸಮಾವೇಶವನ್ನು ಆಯೋಜಿಲಾಗಿದೆ.

   1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಈಗ ಆ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದೆ. ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಪ್ರಯುಕ್ತ ಬೆಳಗಾವಿಯಲ್ಲಿ ಕಳೆದ ವರ್ಷ ಡಿಸೆಂಬರ್ 26, 27ರಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಳಾಗಿತ್ತು. 26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿತ್ತು. ಆದರೆ, ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಡಿಸೆಂಬರ್ 27ರಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.ನಗರಕ್ಕೆ ವಿವಿಐಪಿಗಳ ಆಗಮನದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

 

Recent Articles

spot_img

Related Stories

Share via
Copy link