ಬೆಂಗಳೂರು:
ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ನೂತನ ಸಂಸದರು ಮತ್ತು ಪರಾಜಿತ ಅಭ್ಯರ್ಥಿಗಳ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಚುನಾವಣಾ ಫಲಿತಾಂಶ ಕುರಿತು ಪರಾಮರ್ಶೆ ನಡೆಸಿದರು.
ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯ ಹಾಗೂ ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಮುಂದೆ ಕೈಗೊಳ್ಳಬೇಕಿರುವ ಕಾರ್ಯಗಳ ಕುರಿತು ಈ ವೇಳೆ ಚರ್ಚಿಸಲಾಯಿತು. ಇದಕ್ಕೂ ಮುನ್ನಾ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೇರಿ ಭವನ ಹಿಂಭಾಗದ ವಿಶೇಷ ನ್ಯಾಯಾಲಯ ವಿಚಾರಣೆಗೆ ಅವರು ಹಾಜರಾದರು. ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿತು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ಹೊಸದಾಗಿ ಆಯ್ಕೆಯಾದ ಸಂಸದರನ್ನು ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ. ಯಾವ ರೀತಿ ಕೆಲಸ ಮಾಡಬೇಕು ಅನ್ನೋದನ್ನು ತಿಳಿಸಿಕೊಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ವ್ಯಕ್ತಿ ಗೆದ್ದಿದ್ದಾರೆ. ಡಿಕೆ ಸುರೇಶ್ ಗೆಲುವಿನ ಬಗ್ಗೆ ಅತಿಯಾದ ಆತ್ಮವಿಶ್ವಾಸದಲ್ಲಿದೆ. ಆದರೆ, ಬಿಜೆಪಿವರು ಒಳ್ಳೆಯ ತಂತ್ರಗಾರಿಕೆ ಮಾಡಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆ ಕುರಿತು ಇನ್ನೂ ಚಿಂತನೆ ನಡೆಸಿಲ್ಲ.ಇನ್ನೋ ಸೋಲಿನ ನಿದ್ರೆಯಿಂದ ಹೊರಬಂದಿಲ್ಲ ಎಂದರು.