2019ರ ಮಾನನಷ್ಟ ಮೊಕದ್ದಮೆ : ಮಧ್ಯಂತರ ತಡೆಗೆ ಕೋರ್ಟ್‌ ಗೆ ರಾಹುಲ್‌ ಮನವಿ

ನವದೆಹಲಿ

     2019ರ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಇತ್ತೀಚೆಗೆ ಸಂಸತ್ತಿನಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಪರಾಧ ಮತ್ತು ಶಿಕ್ಷೆಯನ್ನು ನಾಳೆ (ಸೋಮವಾರ, ಏಪ್ರಿಲ್ 03) ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

      ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಅವರು ತಮ್ಮ ಅರ್ಜಿಯಲ್ಲಿ ಸೆಷನ್ಸ್ ನ್ಯಾಯಾಲಯವನ್ನು ಕೋರಿದ್ದಾರೆ. ಈ ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ನೀಡಿರುವ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

      2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಸೂರತ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಬಳಿಕ ಜಾಮೀನು ನೀಡಲಾಯಿತು. ಅವರ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತುಗೊಳಿಸಲಾಯಿತು. ರಾಹುಲ್ ಗಾಂಧಿ ನ್ಯಾಯಾಲಯದ ತೀರ್ಪಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ ಲೋಕಸಭೆಯ ಸಚಿವಾಲಯವು ತ್ವರಿತವಾಗಿ ಅವರನ್ನು ಸಂಸತ್ ಸದಸ್ಯತ್ವದಿಂದ ಅಮಾನತುಗೊಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap