ರಾಯಚೂರು:
ಮಾಜಿ ಶಾಸಕನಿಂದ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆದಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆ ಆವರಣದಲ್ಲಿ ಘಟನೆ ನಡೆದಿದೆ. ಮಾನ್ವಿ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ಮುಖಂಡ ಆಲ್ದಾಳ್ ವೀರಭದ್ರಪ್ಪನ ಮೇಲೆ ಹಲ್ಲೆ ನಡೆಸಿರುವ ಆರೋಪವಿದೆ. ಹಲ್ಲೆ ನಡೆದ ಸಮಯದ ಸಿಸಿ ಕ್ಯಾಮೆರಾ ದೃಶ್ಯಾವಳಿ ನೀಡಲು ಮಾನ್ವಿ ಠಾಣೆ ಪೊಲೀಸರಿಗೆ ಆಲ್ದಾಳ ವೀರಭದ್ರಪ್ಪ ಮನವಿ ಮಾಡಿದ್ದಾರೆ. ಮಾಜಿ ಶಾಸಕನ ಬೆಂಬಲಿಗನಿಗೆ ಥಳಿಸಿದ ಆರೋಪದಲ್ಲಿ ಕಾಂಗ್ರೆಸ್ ಮುಖಂಡನಿಗೆ ಕಾಲಿನಿಂದ ಒದ್ದು, ಮುಖಕ್ಕೆ ಗುದ್ದಿದ್ದಾರೆ ಎನ್ನಲಾಗಿದೆ.
ಆಲ್ದಾಳ ವೀರಭದ್ರಪ್ಪನ ಜಮೀನಿನಲ್ಲಿ ಕೆಲವರು ಜೂಜು ಅಡ್ಡೆ ಮಾಡಿಕೊಂಡಿದ್ದರು. ಇಸ್ಪೀಟ್ ಆಟ ವಿಚಾರದಲ್ಲಿ ಗಲಾಟೆ ಆದ ಹಿನ್ನೆಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.








