ರಾಯಚೂರು :
ಕಾರು ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರಿನ ಸೀತಾನಗರ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರು ಚಾಲಕ ಸಜೀವ ದಹನಗೊಂಡಿದ್ದಾರೆ.
ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ