ಬೆಂಗಳೂರು:
ಸಿಲಿಕಾನ್ ಸಿಟಿಯ ಆಗ್ನೇಯ ವಿಭಾಗದಲ್ಲಿ ರೌಡಿ ಶೀಟರ್‌ಗಳು ಮತ್ತು ಸಮಾಜಘಾತುಕರ ನಿವಾಸಗಳ ಮೇಲೆ ದಾಳಿ ಮುಂದುವರಿದಿದೆ.
ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗುತ್ತಿದೆ. ಗುರುವಾರ ಉತ್ತರ, ದಕ್ಷಿಣ ಮತ್ತು ಪಶ್ಚಿಮ ವಿಭಾಗಗಳಲ್ಲಿ ದಾಳಿ ನಡೆಸಲಾಗಿತ್ತು. ಶುಕ್ರವಾರ ಎಚ್‌ಎಸ್‌ಆರ್ ಲೇಔಟ್, ತಿಲಕ್‌ನಗರ, ಪರಪ್ಪನ ಅಗ್ರಹಾರ, ಕೋರಮಂಗಲ ಮತ್ತಿತರ ಪ್ರದೇಶಗಳಲ್ಲಿನ 100ಕ್ಕೂ ಹೆಚ್ಚು ಕ್ರಿಮಿನಲ್‌ಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ 1500 ಜನರ ವಿರುದ್ಧ ವಾರೆಂಟ್ ಜಾರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.
