ತುಮಕೂರು:
ಇನ್ನೂ ನಿದ್ದೆಯಿಂದ ಎದ್ದು ಕೂರುವುದರೊಳಗೆ ಲೋಕಾಯುಕ್ತ ಅಧಿಕಾರಿಗಳು ತುಮಕೂರು ಅಭಿವೃದ್ಧಿ ಪ್ರಾಧಿಕಾರದ ಪ್ಲಾನಿಂಗ್ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ…
ಆದಾಯಕ್ಕಿಂತ ಹೆಚ್ಚಿನ ಆಸ್ತಿಪಾಸ್ತಿ ಹೊಂದಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ತುಮಕೂರಿನ ನಗರಾಭಿವೃದ್ಧಿ ಪ್ರಾಧಿಕಾರದ(TUDA) ಪ್ಲಾನಿಂಗ್ ವಿಭಾಗದ ಜಂಟಿ ನಿರ್ದೇಶಕರ ಮನೆ ಮೇಲೆ ತುಮಕೂರು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿರುವ ಘಟನೆ ನಡೆದಿದೆ
ನಗರಾಭಿವೃದ್ದಿ(TUDA) ಪ್ಲಾನಿಂಗ್ ವಿಭಾಗದ ಜಂಟಿ ನಿರ್ದೇಶಕ ನಾಗರಾಜು ಎಂಬುವರ ಮನೆ (ದೇವನೂರು ಚರ್ಚ್ ಬಳಿ) ಹಾಗೂ ಅರಸೀಕೆರೆ ಮನೆ, ಫಾರ್ಮ್ ಹೌಸ್,ಕಚೇರಿ ಮೇಲೂ ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ
ಕಳೆದ 18 ತಿಂಗಳಿಂದ ಟೂಡಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾಗರಾಜು ಅಕ್ರಮ ಆಸ್ತಿ ಸಂಪಾಧಿಸಿದ್ದಾರೆ ಎಂಬ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ