ಬೆಂಗಳೂರು:
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾರರ ಅನುಕೂಲಕ್ಕಾಗಿ ಮೂರು ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಹೆಚ್ಚುವರಿ ಜನರು ಓಡಾಟ ಮಾಡುವುದರಿಂದ ಈಗ ಸಂಚರಿಸುತ್ತಿರುವ ರೈಲುಗಳಿಗೂ ಹೆಚ್ಚುವರಿ ಕೋಚ್‌ಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ.
ಬೆಂಗಳೂರು-ಬೆಳಗಾವಿ, ಬೆಂಗಳೂರು-ಬೀದರ್, ಬೆಂಗಳೂರು (ಯಶವಂತಪುರ) -ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚರಿಸಲಿವೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿಗೆ ಒಂದು ರೈಲು ಸಂಚರಿಸಲಿದ್ದು ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಮೇ 9ರಂದು 8.30ಕ್ಕೆ ಹೊರಡಲಿದ್ದು, ಮೇ 10ರಂದು ಬೆಳಗ್ಗೆ 8.20ಕ್ಕೆ ಬೆಳಗಾವಿ ತಲುಪಲಿದೆ.
ಮೇ 10 ರ ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಡಲಿದ್ದು ಮೇ 11ರ ಮುಂಜಾನೆ 5 ಗಂಟೆಗೆ ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ತಲುಪಲಿದೆ. ಯಶವಂತಪುರದಿಂದ ಮುರುಡೇಶ್ವರಕ್ಕೂ ವಿಶೇಷ ರೈಲು ಮೇ 9 ರಂದು ರಾತ್ರಿ 11.55ಕ್ಕೆ ಹೊರಡಲಿದ್ದು, ಮೇ 10ರಂದು ಮಧ್ಯಾಹ್ನ 12.55ಕ್ಕೆ ತಲುಪಲಿದೆ. ಅದೇ ದಿನ ಮಧ್ಯಾಹ್ನ 1.30ಕ್ಕೆ ಮುರುಡೇಶ್ವರದಿಂದ ಹೊರಡಲಿದ್ದು ಮರುದಿನ 4 ಗಂಟೆಗೆ ಯಶವಂತಪುರಕ್ಕೆ ಬರಲಿದೆ.
ಅರಕ್ಕೋಣಂ ಬಳಿ ಏನಾಯ್ತು? ಬೀದರ್ ಗೆ ತಲುಪುವ ರೈಲು ಮೇ 9ರಂದು ಸಂಜೆ 5 ಗಂಟೆಗೆ ಸಂಗೊಳ್ಳಿ ರಾಯಣ್ಣ ನಿಲ್ದಾಣ (ಮೆಜೆಸ್ಟಿಕ್) ನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 7.20ಕ್ಕೆ ಬೀದರ್ ತಲುಪಲಿದೆ. ಮೇ 10ರಂದು ರಾತ್ರಿ 8 ಗಂಟೆಗೆ ಬೀದರ್ ನಿಂದ ಹೊರಟು ಮರುದಿನ ಬೆಳಗ್ಗೆ 11 ಗಂಟೆಗೆ ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ಬರಲಿದೆ.
ಈಗಾಗಲೇ ಸಂಚರಿಸುತ್ತಿರುವ ರೈಲುಗಳಿಗೆ ಕೂಡ ಹೆಚ್ಚುವರಿ ಕೋಚ್‌ಗಳನ್ನು ಅಳವಡಿಸಲಾಗಿದೆ. 17307/ 17308 ಬಾಗಲಕೋಟೆ, ಮೈಸೂರು, ಬಸವ ಎಕ್ಸ್ಪ್ರೆಸ್ಗೆ ಹಾಗೂ 16593/94 ಬೆಂಗಳೂರು ನಾಂದೇಡ್ ವಯಾ ರಾಯಚೂರು, ಯಾದಗಿರಿ ರೈಲಿಗಳಿಗೆ ತಲಾ ಒಂದು ಕೋಚ್ ಸೇರ್ಪಡೆ ಮಾಡಲಾಗುತ್ತದೆ. ಬೆಂಗಳೂರು-ಕಾರವಾರ ಮಧ್ಯೆ ಸಂಚರಿಸುವ 16595/96 ಸಂಖ್ಯೆಯ ರೈಲಿಗೂ ಹೆಚ್ಚುವರಿ ಕೋಚ್ ಇರಲಿದೆ, 12079/80 ಬೆಂಗಳೂರು-ಹುಬ್ಬಳ್ಳಿ ಜನಶತಾಬ್ಧಿ ಎಕ್ಸ್ಪ್ರೆಸ್ಗೆ ಎರಡು ಹೆಚ್ಚುವರಿ ಕೋಚ್ಗಳು ಇರಲಿವೆ ಎಂದು ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ