ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ….!

ಬೆಂಗಳೂರು :

    ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಇದ್ದರೆ, ಚಿತ್ರದುರ್ಗ, ದಾವಣಗೆರೆ, ಹಾಸನ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಉತ್ತರ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿಯಲ್ಲಿ ಕೂಡ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap