ಬೆಂಗಳೂರು :
ರಾಜ್ಯದ ಗಡಿ ಜಿಲ್ಲೆಗಳಿಗೆ ಮುಂಗಾರು ಮಳೆಯ ಪ್ರವೇಶವಾಗಿದ್ದು, ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಜೂನ್ 7 ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಲಾರ, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.