ಬೆಂಗಳೂರು
ರಾಜ್ಯದಲ್ಲಿ ಮತ್ತೆ ಮಳೆ ರಾಯನ ಅಬ್ಬರ ಜೋರಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರ್ನಾಟಕದಲ್ಲಿ ಮುಂಗಾರು ಆರಂಭಕ್ಕೂ ಮುನ್ನವೇ ಭರ್ಜರಿ ಮಳೆಯಾಗಿತ್ತು.
ಕಳೆದ ಎರಡು ತಿಂಗಳು ಕಾಲ ಭರ್ಜರಿ ಮಳೆಯಿಂದಾಗಿ ರಾಜ್ಯದ ಬಹುಕೇತ ಜಲಾಶಯಗಳು ಭರ್ತಿಯಾಗಿದೆ. ಇನ್ನೂ ರಾಜ್ಯದಲ್ಲಿ ಉತ್ತಮ ಮಳೆಯಿಂದಾಗಿ ರೈತರ ಮೊಗದಲ್ಲೂ ಸಂತಸ ಮೂಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ಡ್ಯಾಂಗಳು ಭರ್ತಿಯಾಗಿ ತುಂಬಿ ಹರಿಯುತ್ತಿದೆ. ಇನ್ನೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆಯಾಗುತ್ತಿದ್ದು, 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ.
ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಇರುವ ಸಾಧ್ಯತೆಯಿದೆ.
ಪುತ್ತೂರು ಎಚ್ಎಂಎಸ್, ಕೋಟ, ಹಣಂಬೂರು ವೀಕ್ಷಣಾಲಯ, ಗೋಕರ್ಣ, ಅಂಕೋಲಾ, ಕಾರ್ಕಳದಲ್ಲಿ ತಲಾ 3 ಸೆಂ.ಮೀ ಮಳೆಯಾಗಲಿದೆ. ಕಾರವಾರ ಮಂಗಳೂರು ಎಪಿ ಅನ್ಸರ್ವೇಟರಿ, ಗೇರ್ಸೊಪ್ಪ, ಕುಮಟಾ, ಉಡುಪಿ, ಶಿರಾಲಿ ಪಿಟಿಒ, ಲಿಂಗನಮಕ್ಕಿ ಎಚ್ಎಂಎಸ್, ಶೃಂಗೇರಿ ಎಚ್ಎಂಎಸ್ 2 ಸೆಂ.ಮೀ ಮಳೆಯಾಗಿದೆ. ಧಾರವಾಡ, ನರಗುಂದ, ಭಾಗಮಂಡಲ, ಕಮ್ಮರಡಿ ಸೇರಿ ಕೊಟ್ಟಿಗೆಹಾರ, ಜಯಪುರ, ಪೊನ್ನಂಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಇನ್ನೂ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೀದರ್ನಲ್ಲಿ ಒಣಹವೆ ಇರಲಿದೆ.